ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವು ಎಲ್ಲರಿಗೂ ಶಕ್ತಿಯನ್ನು ತಂದುಕೊಟ್ಟಿದೆ. ಸಂವಿಧಾನದ ಆಶಯದಲ್ಲಿ ನಡೆದುಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.
ಹೊಳಲ್ಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವು ಎಲ್ಲರಿಗೂ ಶಕ್ತಿಯನ್ನು ತಂದುಕೊಟ್ಟಿದೆ. ಸಂವಿಧಾನದ ಆಶಯದಲ್ಲಿ ನಡೆದುಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ವತಿಯಿಂದ ಸಂವಿಧಾನ ಸೌಧದಲ್ಲಿ ನಡೆದ ಸಂವಿಧಾನ ದಿನಾಚರಣೆ ಉದ್ಗಾಟಿಸಿ ಮಾತನಾಡಿ, ಭಾರತದಲ್ಲಿ ಸಂವಿಧಾನದಡಿಯಲ್ಲಿ ಎಲ್ಲಾ ಜಾತಿ ಧರ್ಮದವರು ಸಮಾನವಾಗಿ ಬದುಕುತ್ತಿದ್ದಾರೆ. ಪ್ರತಿನಿತ್ಯ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದವರಿಗೆ ತಲಾ ಐವತ್ತು ಸಾವಿರ ರು.ಗಳನ್ನು ನೀಡುವುದಾಗಿ ಘೋಷಿಸಿದ್ದೆ. ಮುಂದಿನ ವರ್ಷ 625 ಕ್ಕೆ 625 ಅಂಕಗಳನ್ನು ಪಡೆಯುವವರಿಗೆ ಒಂದು ಲಕ್ಷ ರು.ಗಳನ್ನು ಕೊಡುವುದಾಗಿ ಭರವಸೆ ನೀಡಿದರು.ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣವಂತರಾಗಿ ಅತ್ಯುತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ಮೂಲಕ ಗುರು-ಹಿರಿಯರು, ನೀವು ಪಾಠ ಕಲಿತ ಶಿಕ್ಷಣ ಸಂಸ್ಥೆ ಹಾಗೂ ಹೆತ್ತವರಿಗೆ ಕೀರ್ತಿ ತನ್ನಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್.ಎಸ್, ತಹಶೀಲ್ದಾರ್ ವಿಜಯಕುಮಾರ, ಡಾ.ಶಿವಮೂರ್ತಿನಾಯ್ಕ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತಪ್ಪ, ಪಾಂಡುರಂಗಸ್ವಾಮಿ, ಮಂಜು, ರಾಜಪ್ಪ, ಪ್ರಸನ್ನ, ಮೂಲೆಮನೆ ಮಧು, ನವೀನ್, ಮಹೇಶ್, ರವಿ, ಶಿವಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳು ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.