ಉಡುಪಿ: ಇಲ್ಲಿನ ಅಲೆವೂರು ಪೂರ್ಣಪ್ರಜ್ಞ ಪಬ್ಲಿಕ್ ಸ್ಕೂಲ್‌ನಲ್ಲಿ ಪೂರ್ಣಪ್ರಜ್ಞಾ ಕಾಲೇಜಿನ ಎನ್.ಎಸ್.ಎಸ್. ಘಟಕಗಳು ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಹಿಸಿದ್ದು, ಶಿಬಿರವನ್ನು ಉದ್ಘಾಟಿಸಿದರು.ವಿದ್ಯಾರ್ಥಿಗಳು ಬದುಕಿನಲ್ಲಿ ಆದ್ಯಾತ್ಮೀಕತೆಯ ಮನೋಭಾವವನ್ನು ಅಳವಡಿಸಿಕೊಂಡಿದ್ದೆ ಆದಲ್ಲಿ ಆ ವಿದ್ಯಾರ್ಥಿಯ ಯಶಸ್ಸು ಖಂಡಿತ ಸಾಧ್ಯ ಎಂದು ಹೇಳುತ್ತ ಶಿಬಿರಾರ್ಥಿಗಳಿಗೆ ಆಶೀರ್ವಚನ ನೀಡಿದರು.ಪ್ರಾಂಶುಪಾಲರಾದ ಡಾ.ರಾಮು.ಎಲ್. ಮಾತನಾಡುತ್ತ ಪಿಪಿಸಿಯ ಎನ್.ಎಸ್.ಎಸ್ ವಿದ್ಯಾರ್ಥಿಗಳು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ಬೇಕಾಗುವ ಎಲ್ಲಾ ಕೌಶಲಗಳನ್ನು ಒಟ್ಟುಗೂಡಿಸಿ ವಿಶ್ವವಿದ್ಯಾಲಯ ಮಟ್ಟದ ಕ್ಷಿತಿಜ-೨೦೨೫ ಫೆಸ್ಟ್ ಅನ್ನು ಆಯೋಜಿಸಿ ಯಶಸ್ವಿಯಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ.ಶ್ರೀರಮಣ ಐತಾಳ್, ಪುಂಡರಿಕಾಕ್ಷ ಕೊಡಂಚ, ಅಲೆವೂರು ಪೂರ್ಣಪ್ರಜ್ಞ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಸಂಧ್ಯಾ ವಿ ಬಿ, ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿಗಳಾದ ಡಾ.ನಾಗರಾಜ.ಜಿ.ಪಿ, ಶ್ರೀಮತಿ ಸುಮರ್ಣ, ಸಹ ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ಡಾ.ವಿನೋದ್ ಕುಮಾರ್, ಸ್ವಾತಿ ಉಪಸ್ಥಿತರಿದ್ದರು.
ದತ್ತು ಗ್ರಾಮ ಅಲೆವೂರಿನಲ್ಲಿ ಪಿಪಿಸಿಯ ಎನ್ಎಸ್ಎಸ್ ಶಿಬಿರ
ಇಲ್ಲಿನ ಅಲೆವೂರು ಪೂರ್ಣಪ್ರಜ್ಞ ಪಬ್ಲಿಕ್ ಸ್ಕೂಲ್‌ನಲ್ಲಿ ಪೂರ್ಣಪ್ರಜ್ಞಾ ಕಾಲೇಜಿನ ಎನ್.ಎಸ್.ಎಸ್. ಘಟಕಗಳು ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಹಿಸಿದ್ದು, ಶಿಬಿರವನ್ನು ಉದ್ಘಾಟಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.