ಸಮಾಜದಲ್ಲಿ ಅಶಾಂತಿ ಉಂಟಾಗಿ, ಸಂವಿಧಾನಬದ್ಧ ಕಾನೂನುಗಳನ್ನು ಪಾಲಿಸುವಲ್ಲಿ ಪ್ರಜೆಗಳು ವಿಫಲರಾದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಅಗತ್ಯ ಮಾರ್ಗದರ್ಶನ ಹಾಗೂ ರಕ್ಷಣೆ ನೀಡುವ ಮೂಲಕ ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಪೊಲೀಸ್ ಇಲಾಖೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದಾಗ ಶಾಂತಿ, ಸುವ್ಯವಸ್ಥೆ ನೆಲೆಸಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

ಬಂಟ್ವಾಳ: ಸಮಾಜದಲ್ಲಿ ಅಶಾಂತಿ ಉಂಟಾಗಿ, ಸಂವಿಧಾನಬದ್ಧ ಕಾನೂನುಗಳನ್ನು ಪಾಲಿಸುವಲ್ಲಿ ಪ್ರಜೆಗಳು ವಿಫಲರಾದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಅಗತ್ಯ ಮಾರ್ಗದರ್ಶನ ಹಾಗೂ ರಕ್ಷಣೆ ನೀಡುವ ಮೂಲಕ ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಪೊಲೀಸ್ ಇಲಾಖೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಿದಾಗ ಶಾಂತಿ, ಸುವ್ಯವಸ್ಥೆ ನೆಲೆಸಲು ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಹರೀಶ್ ಸಿದ್ದಕಟ್ಟೆ ಅವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಬಡ್ತಿಗೊಂಡ ಹಿನ್ನೆಲೆಯಲ್ಲಿ ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ ಅವರು ಹರೀಶ್ ಅವರ ಪ್ರಾಮಾಣಿಕ ಪೊಲೀಸ್ ಸೇವೆಯನ್ನು ಶ್ಲಾಘಿಸಿ ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹರೀಶ್ ಸಿದ್ದಕಟ್ಟೆ, ಹುಟ್ಟೂರಾದ ಸಿದ್ದಕಟ್ಟೆಯಲ್ಲಿ ದೊರೆತ ಗೌರವ ಹಾಗೂ ಅಭಿನಂದನೆ ಇತರ ಎಲ್ಲ ಗೌರವಗಳಿಗಿಂತಲೂ ಮಿಗಿಲಾಗಿದೆ. ಸಂಘದ ಸದಸ್ಯರ ಸಾಧನೆಯನ್ನು ಗುರುತಿಸಿ ಈ ರೀತಿಯಲ್ಲಿ ಅಭಿನಂದಿಸುವ ಸಹಕಾರ ಸಂಘದ ಯೋಚನೆ ಹಾಗೂ ಬದ್ಧತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್.ಆರ್., ಶಿವ ಗೌಡ, ರಾಜೇಶ್ ಶೆಟ್ಟಿ, ನವೀನ ಹೆಗ್ಡೆ, ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಕೀರ್ತಿರಾಜ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಸಂಘದ ಸದಸ್ಯರಾದ ಬಾಬುರಾಜೇಂದ್ರ ಶೆಟ್ಟಿ ಅಜ್ಜಾಡಿ, ಚಂದಯ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.