ಜ.೧೯ರಂದು ಹೈದ್ರಾಬಾದ್‌ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ವಿದ್ಯಾರ್ಥಿಗಳಾದ ಎಸ್.ಕೆ. ನಂದನ್, ರಾಹುಲ್ ಆಯ್ಕೆಯಾಗಿದ್ದಾರೆ.
ಹಗರಿಬೊಮ್ಮನಹಳ್ಳಿ: ಪಟ್ಟಣದ ಆದರ್ಶ ಶಾಲೆಯ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ಸೌತ್ ಇಂಡಿಯಾ ನ್ಯಾಷನಲ್ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜ.೧೯ರಂದು ಹೈದ್ರಾಬಾದ್‌ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ವಿದ್ಯಾರ್ಥಿಗಳಾದ ಎಸ್.ಕೆ. ನಂದನ್, ರಾಹುಲ್ ಆಯ್ಕೆಯಾಗಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾಕರ ಮಾತನಾಡಿ, ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ವತಃ ಪ್ರಾಯೋಗಿಕ ಜ್ಞಾನ ಬೆಳೆಸುವ ಅಗತ್ಯವಿದೆ. ಆದರ್ಶ ಶಾಲೆಯ ಮಕ್ಕಳಂತೆ ಪ್ರತಿಯೊಬ್ಬ ಶಿಕ್ಷಕರು ಮಕ್ಕಳಿಗೆ ವಿವಿಧ ತರಬೇತಿ ಹಾಗೂ ಗುಣಾತ್ಮಕ ಬೋಧನೆ ಮೂಲಕ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸ್ಪಂದಿಸಬೇಕು. ತಾಲೂಕಿನ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡುವಂತಿವೆ. ಈ ಸಾಲಿನ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಸುಧಾರಿಸಲು ಶಿಕ್ಷಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದರು.
ಆದರ್ಶ ಶಾಲೆಯ ಮಕ್ಕಳು ದಾರಾವಾಡದಲ್ಲಿ ಲೋಕಾಸ್ಟ್ ಅಟೋಮೇಟಿಕ್ ವಾಟರ್ ಡಿಸ್ಪೆನ್ಸರ್ ಎಂಬುವ ಪ್ರಯೋಗ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರಿಗೆ ಶಾಲೆಯ ಮುಖ್ಯಗುರು ರವಿ ನಾಯ್ಕ ಎಲ್.ಡಿ., ಶಿಕ್ಷಕರಾದ ಸಂತೋಷ್ ಕುಮಾರ ಕೆ., ಎಂ.ಸಂತೋಷ್‌ಕುಮಾರ ಮಾರ್ಗದರ್ಶನ ನೀಡಿದ್ದಾರೆ. ಶಾಲೆಯ ಶಿಕ್ಷಕರಾದ ಶಶಿರೇಖಾ, ರಾಜಶೇಖರಪ್ಪ, ಉಷಾ, ವೀಣಾ ಸೇರಿ ಇತರೆ ಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.ಹಗರಿಬೊಮ್ಮನಹಳ್ಳಿ ಪಟ್ಟಣದ ಆದರ್ಶ ಶಾಲೆಯ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ಸೌತ್ ಇಂಡಿಯಾ ನ್ಯಾಷನಲ್ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.