ಸಾರಾಂಶ
ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ವಿಜ್ಞಾನ ಪ್ರಾಯೋಗಿಕ ತರಬೇತಿ ಕಾರ್ಯಗಾರವನ್ನು ತಳಕು ಎಸ್.ಜಿ.ಟಿ. ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದು, ಮುಖ್ಯಶಿಕ್ಷಕ ಸೈಯದ್ ಪೈಜುಲ್ಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ವಿಜ್ಞಾನ ಪ್ರಾಯೋಗಿಕ ತರಬೇತಿ ಕಾರ್ಯಗಾರವನ್ನು ತಳಕು ಎಸ್.ಜಿ.ಟಿ. ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದು, ಮುಖ್ಯಶಿಕ್ಷಕ ಸೈಯದ್ ಪೈಜುಲ್ಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಗಸ್ತ್ಯ ಫೌಂಡೇಷನ್ ಅಂತರಾಷ್ಟ್ರೀಯ ಪ್ರತಿಷ್ಠಾನ, ಟಾಟಾ ಪವರ್‌ಲ್ಯಾಬ್ ಆನ್ ಎ, ಬೈಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ತಳಕು ಹೋಬಳಿಯ ಆಯ್ದ 30 ಸರ್ಕಾರಿ ಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಶಿಕ್ಷಕ ಸೈಯದ್ ಪೈಜುಲ್ಲಾ ದೇಶದ ವಿಜ್ಞಾನ ಇಂದು ವಿಶ್ವಮನ್ನಣೆ ಗಳಿಸಿದೆ. ವಿಜ್ಞಾನದ ವಿಚಾರದಲ್ಲಿ ಪ್ರಗತಿಯನ್ನು ಸಾಧಿಸಿದರೆ ಮಾತ್ರ ನಾವೆಲ್ಲರೂ ಉಳಿದ ಗುರಿಯನ್ನು ಸುಲಭವಾಗಿ ದಾಟಬಹುದು. ಈ ನಿಟ್ಟಿನಲ್ಲಿ ವಿಜ್ಞಾನ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನು ತುಂಬುವ ಕಾರ್ಯದಲ್ಲಿ ನಿರತರಾಗಬೇಕು ಎಂದರು.ಕೆ.ಎಸ್. ಶ್ರೀಕಾಂತ್ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಅಗಸ್ತ್ಯ ಫೌಂಡೇಷನ್ ಅಂತರಾಷ್ಟ್ರೀಯ ಪ್ರತಿಷ್ಠಾನ, ಟಾಟಾ ಪವರ್‌ಲ್ಯಾಬ್ ಆನ್ ಎ, ಬೈಕ್ ಕಂಪನಿಗಳ ಸಹಯೋಗದಲ್ಲಿ ಆಯ್ದ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಗಾರವನ್ನು ಆಯೋಜಿಸಿದೆ ಎಂದರು.
ಇಲ್ಲಿ ವಿಜ್ಞಾನದ ಹೊಸ, ಹೊಸ ಆವಿಷ್ಕಾರಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದಲ್ಲಿ ವಿಜ್ಞಾನದ ವಿಷಯವನ್ನು ಅರಿಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ವಿಜ್ಞಾನವನ್ನು ಅಭ್ಯಾಸ ಮಾಡಬೇಕು ಎಂದರು.ಅಗಸ್ತ್ಯ ಫೌಂಡೇಷನ್ ಶಿಕ್ಷಕರಾದ ಬಸವೇಶ್ವರ, ಚಂದ್ರಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.