ಎನ್ಎಸ್‌ಎಸ್‌ ಶಿಬಿರದಲ್ಲಿ ಕಲಿತಿದ್ದನ್ನು ನಿತ್ಯ ಅಭ್ಯಾಸ ಮಾಡಿ: ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ

| Published : Apr 21 2025, 12:54 AM IST

ಎನ್ಎಸ್‌ಎಸ್‌ ಶಿಬಿರದಲ್ಲಿ ಕಲಿತಿದ್ದನ್ನು ನಿತ್ಯ ಅಭ್ಯಾಸ ಮಾಡಿ: ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಪೋಷಣ ಪಕ್ವಾಡ ಅಭಿಯಾನದ ಕುರಿತು ಬನ್ನಿಕೊಪ್ಪ ಗ್ರಾಮದ ಓರ್ವ ಗರ್ಭಿಣಿಗೆ ಸೀಮಂತ ಕಾರ್ಯ ಮಾಡಲಾಯಿತು.

ಶಿಗ್ಗಾಂವಿ: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಲಿತಿದ್ದನ್ನು ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್ ಖಾದ್ರಿ ತಿಳಿಸಿದರು.ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಶಿಗ್ಗಾಂವಿ ಪಟ್ಟಣದ ಶ್ರೀಮತಿ ಗೌರಮ್ಮ ಬ. ಅಂಕಲಕೋಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಗ್ಗಾಂವಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿ, ಸ್ವಯಂಸೇವಕರು ಸ್ವಚ್ಛತಾ ಕಾರ್ಯದ ಮೂಲಕ ಗ್ರಾಮಸ್ಥರಿಗೆ ನೈರ್ಮಲ್ಯದ ಅರಿವು ಮೂಡಿಸಿದ್ದಾರೆ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎ.ಸಿ. ವಾಲಿ ಮಾತನಾಡಿ, ಕಳೆದ ಒಂದು ವಾರದಿಂದ ಹಲವು ಯೋಜನೆಗಳ ಅಡಿ ಸುಮಾರು ಕಾರ್ಯಕ್ರಮಗಳನ್ನು ನಮ್ಮ ಸ್ವಯಂಸೇವಕರು ಮಾಡಿದ್ದಾರೆ. ಅದರಲ್ಲಿ ಬನ್ನಿಕೊಪ್ಪ ಗ್ರಾಮದಲ್ಲಿರುವ ಸಾವಿರ ಜನರಲ್ಲಿ ನೂರಕ್ಕೂ ಹೆಚ್ಚು ಅನಾರೋಗ್ಯ ಪೀಡಿತ ರೋಗಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು ಎಂದರು.

ಇನ್ನೊಂದೆಡೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಪೋಷಣ ಪಕ್ವಾಡ ಅಭಿಯಾನದ ಕುರಿತು ಬನ್ನಿಕೊಪ್ಪ ಗ್ರಾಮದ ಓರ್ವ ಗರ್ಭಿಣಿಗೆ ಸೀಮಂತ ಕಾರ್ಯ ಮಾಡಲಾಯಿತು ಎಂದರು.ಸಾನ್ನಿಧ್ಯ ವಹಿಸಿದ್ದ ಗಂಜಿಗಟ್ಟಿಯ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಸ್ವಚ್ಛತೆ, ಆರೋಗ್ಯ ಮತ್ತು ಆಹಾರ ಪದ್ಧತಿ ಬದುಕಿಗೆ ತುಂಬಾ ಮುಖ್ಯವಾಗಿರುತ್ತದೆ. ಅದನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜತೆಗೆ ಹೆಚ್ಚು ಜ್ಞಾನವನ್ನು ಸಂಪಾದಿಸುವ ಕಡೆಗೆ ನಿಮ್ಮ ಗಮನವಿರಲಿ ಎಂದರು.ಡಾ. ಆನಂದ ಇಂದೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿನಯ್ ಕುಲಕರ್ಣಿ ಸ್ವಾಗತಿಸಿದರು. ಪ್ರತಿಮಾ ಗುಂಜಳ ನಿರೂಪಿಸಿದರು. ಪ್ರೊ. ಪ್ರವೀಣ ಸಿದ್ದಣ್ಣನವರ ವಂದಿಸಿದರು. ಕಾರ್ಯಕ್ರಮದಲ್ಲಿ ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಿರಿಜವ್ವ ದೊಡ್ಮನಿ, ಪಿಡಿಒ ಬಸವರಾಜ್ ಪೂಜಾರ್, ಬನ್ನಿಕೊಪ್ಪ ಗ್ರಾಮದ ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಯಾಡಪ್ಪನವರ್, ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜ್ ಬಟ್ಟಿ, ಪ್ರೊ. ಡಿ.ಎಸ್. ಸೊಗಲದ, ಪ್ರೊ. ಕೆ.ಎನ್. ರಾಶಿನಕರ ಡಾ. ಶ್ರದ್ಧಾ ಬೆಳೆದಡಿ ಇತರರು ಇದ್ದರು.ಇಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ಹಾವೇರಿ: ಜಿಲ್ಲಾಡಳಿತದಿಂದ ಜಗಜ್ಯೋತಿ ಶ್ರೀ ಬಸವೇಶ್ವರ, ಶ್ರೀ ಶಂಕರಾಚಾರ್ಯ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ಏ. 21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕೋರ್ಟ್‌ ಹಾಲ್‌ನಲ್ಲಿ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.