ದೀರ್ಘಕಾಲ ವೈದ್ಯಕೀಯ ಸೇವೆ ಸಲ್ಲಿಸಿದ್ದ ಡಾ. ಪ್ರದೀಪ್ ಅವರು ತಮ್ಮ ವೃತ್ತಿಪರ ಸೇವೆಯ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಹೋದ್ಯೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರಿ ಕೂಡ ವೈದ್ಯಕೀಯ ವೃತ್ತಿಯಲ್ಲಿದ್ದು, ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಆಗಮಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದವರು ನಿರ್ಧರಿಸಿದ್ದು, ಬುಧವಾರ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಅರಸೀಕೆರೆ: ನಗರದ ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ಕಳೆದ 15 ವರ್ಷಗಳಿಂದ ಶಸ್ತ್ರಚಿಕಿತ್ಸಾ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ವೈದ್ಯ ಡಾ. ಪ್ರದೀಪ್ (57) ಅವರು ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ ನಿಧನರಾಗಿದ್ದಾರೆ. ಅವರ ಅಕಾಲಿಕ ಅಗಲಿಕೆಯಿಂದ ತಾಲೂಕಿನ ವೈದ್ಯಕೀಯ ವಲಯ ಹಾಗೂ ಸಾರ್ವಜನಿಕರಲ್ಲಿ ಶೋಕದ ಛಾಯೆ ಆವರಿಸಿದೆ.ನಗರದಲ್ಲಿ ದೀರ್ಘಕಾಲ ವೈದ್ಯಕೀಯ ಸೇವೆ ಸಲ್ಲಿಸಿದ್ದ ಡಾ. ಪ್ರದೀಪ್ ಅವರು ತಮ್ಮ ವೃತ್ತಿಪರ ಸೇವೆಯ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಹೋದ್ಯೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರಿ ಕೂಡ ವೈದ್ಯಕೀಯ ವೃತ್ತಿಯಲ್ಲಿದ್ದು, ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಆಗಮಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದವರು ನಿರ್ಧರಿಸಿದ್ದು, ಬುಧವಾರ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಡಾ. ಪ್ರದೀಪ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ನಗರದ ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿತ್ತು. ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದರು.ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ. ಶಿಬಿರ ಹೆಗಡೆ, ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜ್, ಜೆ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಗದೀಶ್, ಡಾ. ದಿನೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗ ಹಾಗೂ ರಕ್ಷಾ ಸಮಿತಿ ಸದಸ್ಯರು ಮೃತರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.ಬಳಿಕ ಡಾ. ಪ್ರದೀಪ್ ಅವರ ಪಾರ್ಥಿವ ಶರೀರವನ್ನು ವಾಹನದ ಮೂಲಕ ಕುಂದಾಪುರ ತಾಲೂಕಿನ ಹಾಲಾಡಿಗೆ ಕಳುಹಿಸಿಕೊಡಲಾಯಿತು. ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ವೈದ್ಯರ ಅಗಲಿಕೆಗೆ ಹಲವರು ಕಂಬನಿ ಮಿಡಿದಿದ್ದಾರೆ.