ಸಾರಾಂಶ
ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆ: ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಬುಧವಾರ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ವಿವಿಧ ಗ್ರಾಮಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.ರಾಜ್ಯದ ಪ್ರಮುಖ ಹುದ್ದೆ ಮುಖ್ಯಮಂತ್ರಿ ಸ್ಥಾನ, ಗ್ಯಾರಂಟಿ ಯೋಜನೆ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರುವುದು ಕುರುಬ ಸಮುದಾಯದವರು. ಅಷ್ಟೇ ಅಲ್ಲ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಸಹ ಕುರುಬ ಸಮುದಾಯಕ್ಕೆ ನೀಡಲಾಗಿದೆ. ಇದನ್ನು ನಾವು ಮರೆಯಬಾರದು ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ''''''''ಪಂಚ ನ್ಯಾಯ ಪಚ್ಚೀಸ್‌ಗ್ಯಾರೆಂಟಿ'''''''' ಭರವಸೆಗಳನ್ನು ನೀಡಲಾಗಿದೆ. ನರೇಗಾ ಕೂಲಿ ಹಣ ₹400ಕ್ಕೆ ಹೆಚ್ಚಳ ಸೇರಿದಂತೆ ಹಲವು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಅದರಂತೆ ನಾವು ಜಾರಿಗೆ ತರುತ್ತೇವೆ ಎಂದರು.ದಾವಣಗೆರೆ ಲೋಕಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಡಿ.ಜಿ.ಶಾಂತನಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ, ಆರ್.ನಾಗಪ್ಪ, ಡಿ.ಜಿ.ವಿಶ್ವನಾಥ್, ಶೀಲಾ ಗದಿಗೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.