ಪರಪ್ಪನ ಅಗ್ರಹಾರ ಜೈಲಿಗೆ ಪ್ರದೋಷ್‌ ಸ್ಥಳಾಂತರ

| Published : Oct 11 2024, 11:53 PM IST

ಸಾರಾಂಶ

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ನಟ ದರ್ಶನ್‌ ಆಪ್ತ ಪ್ರದೋಷ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.

ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ನಟ ದರ್ಶನ್‌ ಆಪ್ತ ಪ್ರದೋಷ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.

ಹೈಕೋರ್ಟ್ ಆದೇಶ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಪ್ರದೋಷ್‌ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ರವಾನಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಲಾಗಿತ್ತು. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪ್ರದೋಷ್‌ ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ.