ಪ್ರಜ್ಞಾ ಉತ್ಸವ: ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್

| Published : May 20 2024, 01:36 AM IST

ಪ್ರಜ್ಞಾ ಉತ್ಸವ: ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
Share this Article
  • FB
  • TW
  • Linkdin
  • Email

ಸಾರಾಂಶ

ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಎರಡು ದಿನಗಳ ರಾಜ್ಯಮಟ್ಟದ ಅಂತರ್‌ಕಾಲೇಜು ‘ಪ್ರಜ್ಞಾ ಫೆಸ್ಟ್ - ೨೦೨೪’ ಇದರ ಸಮಾರೋಪ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ (ಸ್ವಾಯತ್ತ) ನಡೆದ ಎರಡು ದಿನಗಳ ರಾಜ್ಯಮಟ್ಟದ ಅಂತರ್‌ಕಾಲೇಜು ‘ಪ್ರಜ್ಞಾ ಫೆಸ್ಟ್ - ೨೦೨೪’ ಇದರ ಸಮಾರೋಪ ನಡೆಯಿತು. ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ, ಕಟಪಾಡಿಯ ತ್ರಿಶಾ ಕಾಲೇಜಿಗೆ ದ್ವಿತೀಯ ಪ್ರಶಸ್ತಿ ಲಭಿಸಿತು. ಅಂಬಾಗಿಲಿನ ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಜಿಎಂ ವಾದಿರಾಜ ಭಟ್, ಬಹುಮಾನಗಳನ್ನು ವಿತರಿಸಿದರು.

ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಉಡುಪಿ ವಿಭಾಗದ ಆಡಳಿತಾಧಿಕಾರಿಗಳಾಗಿರುವ ಡಾ. ಎ.ಪಿ. ಭಟ್ ಮಾತನಾಡಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ ಬೇರೆ ಬೇರೆ ಕಾಲೇಜುಗಳ ಸುಮಾರು ಒಂದೂವರೆ ಸಾವಿರದಷ್ಟು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ಹೊಂದಿದ್ದಾರೆ ಎಂದರು.

ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಸಂಘ ಕಾರ್ಯಾಧ್ಯಕ್ಷ ಡಾ. ಎಂ.ಆರ್. ಹೆಗಡೆ, ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್., ಪ್ರಜ್ಞಾ ಉತ್ಸವದ ಮುಖ್ಯ ಸಂಯೋಜಕ ಡಾ. ರಮೇಶ್ ಟಿ.ಎಸ್., ಸಹ ಸಂಯೋಜಕಿ ಜಯಲಕ್ಷ್ಮೀ, ಶೈಕ್ಷಣಿಕ ಸ್ಪರ್ಧೆಗಳ ಸಂಯೋಜಕಿ ಪ್ರತಿಭಾ ಆಚಾರ್ಯ, ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕ ಡಾ. ಮಂಜುನಾಥ ಕರಬ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಕಾಲೇಜಿನ ವಿದ್ಯಾರ್ಥಿ ಸಂಘ ಅಧ್ಯಕ್ಷ ಮಾನುಷ್ ಕೋಟ್ಯಾನ್, ವಿದ್ಯಾರ್ಥಿ ಸಂಘದ ಪದಾದಿಕಾರಿಗಳಾದ ಅಮೃತಾ ಭಟ್, ಚೇತನಾ ಪೈ, ನಿಕ್ಷಿತಾ ಉಪಸ್ಥಿತರಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ಮಹೇಶ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಸತ್ಯಮೂರ್ತಿ ಅಭ್ಯಾಗತರಿಗೆ ಸ್ವಾಗತಪುಷ್ಪ ನೀಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಮಲತಾ ನಿರೂಪಿಸಿದರು. ಡಾ. ಮಂಜುನಾಥ ಕರಬ ವಂದಿಸಿ, ಡಾ. ರಮೇಶ್ ಟಿ.ಎಸ್ ಸಮಗ್ರ ತಂಡಪ್ರಶಸ್ತಿ ವಿಜೇತರ ಪಟ್ಟಿಯನ್ನು ವಾಚಿಸಿದರು.

ಪ್ರಜ್ಞಾ-೨೦೨೪ ಉತ್ಸವದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಿಭಾಗಗಳ ೪೫ ಬಗೆಯ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯಮಟ್ಟದ ೨೫ ಕಾಲೇಜುಗಳು ಭಾಗವಹಿಸಿದ್ದವು.