ಸರ್ಕಾರಿ ಸೇವೆಗಳು ಜನರ ಬಳಿಗೆ ತಲುಪಬೇಕು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಸರ್ಕಾರಿ ಸೇವೆಗಳು ಜನರ ಬಳಿಗೆ ತಲುಪಬೇಕು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ತಾಲೂಕಿನ ದಾಬಕಾ (ಸಿ) ಹೋಬಳಿ ಮಟ್ಟದ ಮುರ್ಕಿ ಗ್ರಾಮದ ಹನುಮಾನ್‌ ದೇಗುಲ ಹತ್ತಿರ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಆಂದೋಲನ ನಡೆಸಲಾಗುತ್ತಿದೆ.

ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಮೂಲಕ ಪರಿಶೀಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.

ಕಂದಾಯ, ಕೃಷಿ, ಪಂಚಾಯಿತಿ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆಂದೋಲನದಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಪಹಣಿ, ವಿಧವಾ ವೇತನ, ಗೃಹ ಲಕ್ಷ್ಮೀ, ಸಂಧ್ಯಾ ಸುರಕ್ಷಾ ಯೋಜನೆ, ಆಸ್ಪತ್ರೆ ಹೀಗೆ ವಿವಿಧ ಯೋಜನೆಗಳ ಬಗ್ಗೆ ಇರುವ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿದರು.

ತಾ.ಪಂ. ಇ.ಓ ಹನುಮಂತರಾಯ ಕೌಟಗೆ, ಗ್ರೇಡ್-2 ತಹಸೀಲ್ದಾರ್ ರಮೇಶ್ ಪೆದ್ದೆ, ಶಿರಸ್ತೇದಾರ ಸವಿತಮ್ಮ , ಕಂದಾಯ ನಿರೀಕ್ಷಕ ರಾಜಕುಮಾರ ಕುಲಕರ್ಣಿ, ಪಿಡಿಓ ರಾಮದಾಸ ಬೇಲುರೆ, ಪಶು ವೈದ್ಯಾಧಿಕಾರಿ ಜಡೇಶ ಭಜಂತ್ರಿ, ಆಡಳಿತಾಧಿಕಾರಿ ಮಹೇಶ, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

--

ಕಮಲನಗರ ತಾಲೂಕಿನ ದಾಬಕಾ (ಸಿ) ಹೋಬಳಿ ಮಟ್ಟದ ಮುರ್ಕಿ ಗ್ರಾಮದ ಹನುಮಾನ್‌ ದೇಗುಲ ಹತ್ತಿರ ಶನಿವಾರ ಹಮ್ಮಿಕೊಂಡಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅಮಿತ್ ಕುಮಾರ್ ಕುಲಕರ್ಣಿ ಅಹವಾಲು ಸ್ವೀಕರಿಸಿದರು.