ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಧರ್ಮಪತ್ನಿ ಪ್ರಮೀಳಾ (75) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಬೆಂಗಳೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಮೀಳಾ ಅವರು ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು/ಕೆ.ಎಂ.ದೊಡ್ಡಿ
ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಧರ್ಮಪತ್ನಿ ಪ್ರಮೀಳಾ (75) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.ಬೆಂಗಳೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಮೀಳಾ ಅವರು ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಪುತ್ರ ಡಿ.ಟಿ.ಸಂತೋಷ್, ಪುತ್ರಿಯರಾದ ಡಾ.ಸೌಮ್ಯ ರಮೇಶ್, ಸಂಗೀತ ಮಧುಸೂದನ್, ಶೃತಿ ರಾಜೇಶ್ ಗೌಡ, ಸ್ಪೂರ್ತಿ ಮಹೇಶ್ ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.ಪ್ರಮೀಳಾ ತಮ್ಮಣ್ಣರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮೃತರ ನಿವಾಸಕ್ಕೆ ಆಗಮಿಸಿ ಮಾಜಿ ಸಚಿವ ಡಿ.ಸಿ ತಮ್ಮಣ್ಣ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಸಚಿವ ಎನ್.ಚೆಲುವರಾಯಸ್ವಾಮಿ, ಶಾಸಕರಾದ ಶರವಣ, ಪಿ.ರವಿಕುಮಾರ್, ಪ್ರಿಯಾಕೃಷ್ಣ, ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಡಾ.ಅಶ್ವಥ್ ನಾರಾಯಣ್, ಬಿ.ರಾಮಕೃಷ್ಣ, ಡಾ.ಅನ್ನದಾನಿ, ಸುರೇಶ್ ಗೌಡ, ಎನ್.ಅಪ್ಪಾಜಿಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮುಖಂಡರಾದ ಹೂತಕೆರೆ ಪ್ರಸನ್ನ ಸೇರಿದಂತೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.ನಂತರ ಪ್ರಮೀಳಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಜಯನಗರ ನಿವಾಸದಿಂದ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಆಂಬುಲೆನ್ಸ್ ವಾಹನದಲ್ಲಿ ತಮ್ಮಣ್ಣ ಅವರ ಹುಟ್ಟೂರು ದೊಡ್ಡ ಅರಸಿನಕೆರೆ ಗ್ರಾಮಕ್ಕೆ ಸಂಜೆ ವೇಳೆಗೆ ತರಲಾಯಿತು. ಮಾರ್ಗ ಮಧ್ಯೆ ಜಿಲ್ಲೆಯ ಗಡಿಭಾಗವಾದ ತಾಲೂಕಿನ ನಿಡಘಟ್ಟ, ರುದ್ರಾಕ್ಷಿ ಪುರ ಗೇಟ್, ಸೋಮನಹಳ್ಳಿ, ಕೆಸ್ತೂರು ಕ್ರಾಸ್ ಬಳಿ ಆತಗೂರು ಹೋಬಳಿಯ ಜೆಡಿಎಸ್ , ಜೆಡಿಎಸ್ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಅಂತಿಮ ದರ್ಶನ ಪಡೆದರು.
ಶಿವಪುರ, ಕೊಪ್ಪ ಮತ್ತು ಕೊಲ್ಲಿ ವೃತ್ತದ ಮಾರ್ಗವಾಗಿ ಬಂದ ಪಾರ್ಥಿವ ಶರೀರಕ್ಕೆ ರಸ್ತೆ ಇಕ್ಕೆಲ್ಲಗಳಲ್ಲಿ ನಡೆದಿದ್ದ ಅಸಂಖ್ಯಾತ ಸಾರ್ವಜನಿಕರು ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಪತ್ನಿ ಪ್ರಮೀಳಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.ಬಳಿಕ ಪ್ರವಾಸಿ ಮಂದಿರ ವೃತ್ತಕ್ಕೆ ಬಂದ ಪಾರ್ಥಿವ ಶರೀರಕ್ಕೆ ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರ, ಮಂಡ್ಯ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ, ಜೆಡಿಎಸ್ ಮುಖಂಡರಾದ ಕೆ.ಟಿ.ರಾಜಣ್ಣ, ಕೂಳೆಗೆರೆ ಶೇಖರ್, ಕಾಂಗ್ರೆಸ್ ಮುಖಂಡರಾದ ಕದಲೂರು ರಾಮಕೃಷ್ಣ, ಸಿ.ನಾಗೇಗೌಡ, ಕೆಸ್ತೂರು ದಾಸೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು. ನಂತರ ಪ್ರಮೀಳಾ ತಮ್ಮಣ್ಣ ಅವರ ಪಾರ್ಥಿವ ಶರೀರವನ್ನು ಮಳವಳ್ಳಿ ರಸ್ತೆಯ ಮೂಲಕ ದೊಡ್ಡರಸಿನಕೆರೆ ಗ್ರಾಮಕ್ಕೆ ಕೊಂಡೊಯ್ಯಲಾಯಿತು.
ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಗ್ರಾಮದಲ್ಲಿ ಒಕ್ಕಲಿಗ ಸಂಪ್ರದಾದಂತೆ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯ ನಡೆಯಲಿದೆ ಕುಟುಂಬ ಮೂಲಗಳು ತಿಳಿಸಿವೆ. ಪ್ರಮೀಳಾ ಅವರ ನಿಧನಕ್ಕೆ ಶಾಸಕ ಕೆ.ಎಂ.ಉದಯ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.