ಸಾರಾಂಶ
ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಶುಕ್ರವಾರ ಶಕ್ತಿ ದೇವತೆಯಾದ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು. ಬ್ರಹ್ಮಾಂಡ ಗುರೂಜಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಹಾಸನ: ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಶುಕ್ರವಾರ ಶಕ್ತಿ ದೇವತೆಯಾದ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು.
ವಾಹನದಲ್ಲಿ ರಾಜಮಾತೆ ಪ್ರಮೋದದೇವಿ ಹಾಸನಾಂಬೆ ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಸಕಲ ಸರ್ಕಾರಿ ಗೌರವದೊಂದಿಗೆ ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು. ಮೊದಲು ಹಾಸನಾಂಬೆ ದರ್ಶನ ಪಡೆದು ದರ್ಭಾರ್ ಗಣಪತಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಕಡೆಯಲ್ಲಿ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿದರು.ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಾಲಯಕ್ಕೆ ಶುಕ್ರವಾರ ಬ್ರಹ್ಮಾಂಡ ಗುರೂಜಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಮೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗೆ ಗೆಲುವು: ಎನ್.ಮಹೇಶ್
ಕನ್ನಡಪ್ರಭ ವಾರ್ತೆ ಹಾಸನ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದ ಮತದದಾರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಮೈತ್ರಿಯ ಮೂವರು ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದರು.ಜಿಲ್ಲೆಯಲ್ಲಿ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದು ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಹಾಸನಾಂಬೆ ದೇವಿ ದರ್ಶನ ಮಾಡಬೇಕೆಂಬುದು ಹಲವು ವರ್ಷಗಳ ಬಯಕೆ ಇತ್ತು. ನಾನು ಶಾಸಕ, ಸಚಿವನಾಗಿದ್ದಾಗ ಅವಕಾಶ ಸಿಕ್ಕಿರಲಿಲ್ಲ. ಇಂದು ತಾಯಿ ದರ್ಶನ ಮಾಡುವ ಸೌಭಾಗ್ಯ ಸಿಕ್ಕಿದೆ. ಈ ವರ್ಷ ಒಳ್ಳೆಯ ಮಳೆಯಾಗಿದೆ. ಬೆಂಗಳೂರು ಮತ್ತು ಕೆಲವು ಕಡೆ ಅನಾಹುತ ಕೂಡ ಆಗಿದೆ. ಮಳೆ, ಬೆಳೆ ಚೆನ್ನಾಗಿ ಆಗಿದೆ, ರಾಜ್ಯದ ಯಾವ ಮೂಲೆಯಲ್ಲಿ ಅನಾಹುತ ಆಗುವುದು ಬೇಡ ಎಂದು ತಾಯಿಯಲ್ಲಿ ಬೇಡಿದ್ದೇನೆ. ಇದೊಂದು ಬಹಳ ವಿಶೇಷವಾದ ಶಕ್ತಿಪೀಠವಾಗಿದೆ. ದೇವಿಯನ್ನು ಹತ್ತಿರದಲ್ಲಿ ನೋಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ಹೇಳಿದರು. ಮೂರು ಕಡೆ ಉಪಚುನಾವಣೆ ನಡೆಯುತ್ತಿದ್ದು, ಎರಡು ಕಡೆ ಬಿಜೆಪಿ, ಒಂದು ಕಡೆ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇದ್ದಾರೆ. ಈ ಮೂರು ಜನರ ಗೆಲುವಿಗೆ ತಾಯಿ ಆಶೀರ್ವಾದ ಮಾಡು ಎಂದು ಕೇಳಿಕೊಂಡಿದ್ದೇನೆ. ಮೂರು ಕಡೆ ಗೆಲ್ಲುತ್ತೇವೆ, ಈ ಚುನಾವಣೆ ಸಾರ್ವತ್ರಿಕ ಚುನಾವಣೆ ಅಲ್ಲ, ಇದು ಉಪಚುನಾವಣೆ. ಈ ಮೂರು ಕ್ಷೇತ್ರದ ಮತದದಾರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಒಂದುವರೆ ವರ್ಷ ಕಾಂಗ್ರೆಸಿನ ದುರಾಡಳಿತವನ್ನು ಜನ ನೋಡಿದ್ದಾರೆ. ಇನ್ನೂ ಮೂರೂವರೆ ವರ್ಷ ಈ ದುರಾಡಳಿತ ನಡೆಯಬಾರದು ಎಂದರೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ತಿಳಿಸಿದರು. ಒಂದುವರೆ ವರ್ಷದ ಕಾಂಗ್ರೆಸ್ ಆಡಳಿತ ನೋಡಿದ್ದು, ಎಸ್ಪಿ, ಎಸ್ಟಿ ಹಣ ಲೂಟಿ, ಮೂಡಾ ಹಗರಣ, ಅಭಿವೃದ್ಧಿ ಕೆಲಸ ಆಗ್ತಿಲ್ಲ. ಅದನ್ನು ಗಮನಿಸಿ ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಕೊಡುವ ಸುವರ್ಣಾವಾಕಾಶ ಇದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮೂರು ಕಡೆ ಸೋಲಿಸುವ ಮೂಲಕ ದಿಕ್ಸೂಚಿ ಆಗಬೇಕು. ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಹಾಗೆ ಆಗುತ್ತದೆ. ಚುನಾವಣೆ ಮುಗಿದ ಮೇಲೆ ಸರ್ಕಾರ ಇರುತ್ತೋ, ಇಲ್ವೋ ಗೊತ್ತಾಗುತ್ತದೆ ಎಂದರು.