ಸಾರಾಂಶ
ಶಾಸಕ ಕಾಗೆಗೆ ನಿಗಮ - ಮಂಡಳಿ ಸ್ಥಾನ ?
ಕನ್ನಡಪ್ರಭ ವಾರ್ತೆ ಕಾಗವಾಡ
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗವಾದ ಬೆಳಗಾವಿ ಜಿಲ್ಲೆಯ ಕಾಗವಾಡ ವಿಧನಸಭಾ ಮತಕ್ಷೇತ್ರದದಿಂದ ಸತತ 5 ಬಾರಿ ಶಾಸಕರಾಗಿ ಆಯ್ಕೆಯಾಗಿ, ಹಲವಾರು ಜನಪರ ಕಾರ್ಯಗಳನ್ನು ಮಾಡಿರುವ ಹಿರಿಯ ಶಾಸಕ ರಾಜು ಕಾಗೆಗೆ ಈ ಬಾರಿ ನಿಗಮ - ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಕಾಗವಾಡ ಬ್ಲಾಕ್ ಯುಥ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಅಪರಾಜ ಆಗ್ರಹಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 4 ದಶಕಗಳಿಂದ ಜನಪರ ಹೋರಾಟಗಳನ್ನು ಮಾಡುತ್ತ ಕ್ಷೇತ್ರದ ಹಾಗೂ ಜಿಲ್ಲೆಯ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಜು ಕಾಗೆ 5 ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿತನ ಹಾಗೂ ಅನುಭವದ ಆಧಾರದ ಮೇಲೆ ನಿಗಮ - ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆನ್ನುವುದು ನನ್ನ ಹಾಗೂ ವಿವಿಧ ಸಂಘಟನೆಯವರ ಆಗ್ರಹ ಆಗಿದೆ ಎಂದರು. ಹಳ್ಳಿ ಹಳ್ಳಿಗೆ ಹೋಗಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ರಾಜು ಕಾಗೆ ಕಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಅನುಭವಿ ಹಾಗೂ ಹಿರಿಯ ರಾಜಕಾರಣಿ ಇರುವುದರಿಂದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದರು. ಈ ವೇಳೆ ಪಟ್ಟಣ ಪಂಚಾಯತ್ ಸದಸ್ಯ ಅರುಣ ಗಾಣಿಗೇರ, ಸಂಜಯ ಕುಚನೂರೆ, ಮುಖಂಡ ರಾಜು ಮುಜಾವರ, ರಾಜು ಅರ್ಜುನವಾಡ, ಈಶ್ವರ ಕಾಂಬಳೆ, ಉಮೇಶ ರಡ್ಡಿ, ಸಂಜಯ ಅದಾಟೆ, ಶಿವಾನಂದ ಗೊಲಬಾವಿ, ಅರವಿಂದ ಕಾರ್ಚಿ, ರಾಜು ಮದಬಾವಿ, ಶಿವಾನಂದ ಮಗದುಂ ಸೇರಿದಂತೆ ಅನೇಕರು ಇದ್ದರು.