ತೆರಿಗೆ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಪ್ರತಾಪ್ ಸಿಂಹ ನಾಯಕ್‌ ಆರೋಪ

| Published : Feb 13 2024, 12:48 AM IST

ತೆರಿಗೆ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಪ್ರತಾಪ್ ಸಿಂಹ ನಾಯಕ್‌ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಟೀಕಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆತೆಗೆದುಕೊಂಡಿದ್ದಾರೆ.

ಅವರು ತಮ್ಮ ಪತ್ರಿಕಾಹೇಳಿಕೆಯಲ್ಲಿ, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಹೊರಟ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರಕಾರವು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ- ಮುಖಂಡರು ಸಾಕಷ್ಟು ಭರವಸೆಗಳನ್ನು ಚುನಾವಣೆ ಸಂದರ್ಭದಲ್ಲಿ ಕೊಟ್ಟಿದ್ದರು. ಅಭೂತಪೂರ್ವ ಬೆಂಬಲದೊಂದಿಗೆ ಸರಕಾರ ಅಧಿಕಾರಕ್ಕೆ ಬಂದಾಗ ಸಹಜವಾಗಿ ರಾಜ್ಯದ ಜನರಲ್ಲಿ ಅಪೇಕ್ಷೆ, ನಿರೀಕ್ಷೆಗಳು ಸಾಕಷ್ಟಿದ್ದವು. ಆದರೆ, ಅವೆಲ್ಲವೂ ಮಣ್ಣುಪಾಲಾಗಿದೆ. ಮತದಾರರಲ್ಲಿ ತಾವು ಮೋಸಹೋಗಿದ್ದೇವೆ ಎಂಬ ಅರಿವು ಮೂಡತೊಡಗಿದೆ ಎಂದು ತಿಳಿಸಿದ್ದಾರೆ.ಒಂದು ಸುಳ್ಳನ್ನು ನೂರು ಬಾರಿ ಹೇಳಿ ವಿಧಾನಸಭಾ ಚುನಾವಣೆಯಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದರೋ, ಈಗ ಅದೇರೀತಿ ‘ನನ್ನ ತೆರಿಗೆ ನನ್ನ ಹಕ್ಕು’ ಮೂಲಕ ಅದೇ ಪ್ರಯೋಗ ಮಾಡಲು ಮುಂದಾಗಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ಆಸ್ಪದ ಕೊಡುವುದಿಲ್ಲ. ಸತ್ಯ ಸಂಗತಿಗಳನ್ನು ರಾಜ್ಯದ ಜನರ ಮುಂದೆ ಇಡಲಿದ್ದೇವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ ಬರ ಪರಿಹಾರ ನೀಡಿಲ್ಲ. ಅಲ್ಲದೆ ಕೆಲ ದಿನಗಳ ಹಿಂದೆ ಗುತ್ತಿಗೆದಾರ ಕೆಂಪಯ್ಯ ಅವರು ಶೇ 40% ಲಂಚದ ಆರೋಪವನ್ನು ಹೊರಿಸಿದ್ದಾರೆ. ಹೀಗಾಗಿ ಇವರು ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌. ನಾಚಿಕೆಯಾಗಬೇಕು ಇವರಿಗೆ ಎಂದು ಟೀಕಿಸಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ ಕಲಾವಧಿಯಲ್ಲಿ 2.82 ಲಕ್ಷ ಕೋಟಿ ಬಂದಿದೆ. ಎನ್. ಡಿ.ಎ. ಅವಧಿಯಲ್ಲಿ ಎರಡು ಲಕ್ಷ ಕೋಟಿ ರೂ ಹೆಚ್ಚಿಗೆ ಬಂದಿದೆ. ರಾಜ್ಯಕ್ಕೆ ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ ಎಂದು ಅವರು ಆರೋಪಿಸಿದರು.ಮೊದಲು ರಾಜ್ಯಗಳಿಗೆ ಅನುದಾನ ಶೇ 32% ಬರುತ್ತಿತ್ತು. ಮೋದಿಯವರು ಅದನ್ನು ಶೇ 42% ಹೆಚ್ಚಳ ಮಾಡಿದ್ದಾರೆ.ಹಣಕಾಸು ಆಯೋಗ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಅದು ಎಲ್ಲ ರಾಜ್ಯಗಳಿಗೂ ಭೇಟಿ ನೀಡಿ, ಬಡತನ, ಜಸಂಖ್ಯೆ ತಲಾ ಆದಾಯ ಎಲ್ಲವನ್ನು ಪರಿಗಣನೆ ಮಾಡುತ್ತದೆ. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಭೇಟಿ ನೀಡಿದಾಗ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಆಗ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ತಿಳಿಸಲು ವಿಫಲವಾಗಿದೆ. ರಾಜ್ಯದ ಪಾಲು ಶೇ 4.7 % ದಿಂದ ಶೇ 3.6% ಕ್ಕೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ.