ಸಾರಾಂಶ
ಶೈಕ್ಷಣಿಕ ವರ್ಷವಿಡೀ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವರ ಮನಸ್ಸಿನಲ್ಲಿ ಅಡಗಿರುವ ಸುಪ್ತ ಕಲಾ ಪ್ರೌಢಿಮೆಗಳನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿಯಂಥ ಉತ್ತಮ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ. ಎಸ್.ಶಂಕರಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ಧಾರೆ.
ಕನ್ನಡಪ್ರಭ ವಾರ್ತೆ, ಚನ್ನಗಿರಿ
ಶೈಕ್ಷಣಿಕ ವರ್ಷವಿಡೀ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವರ ಮನಸ್ಸಿನಲ್ಲಿ ಅಡಗಿರುವ ಸುಪ್ತ ಕಲಾ ಪ್ರೌಢಿಮೆಗಳನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿಯಂಥ ಉತ್ತಮ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ. ಎಸ್.ಶಂಕರಪ್ಪ ಅಭಿಪ್ರಾಯಪಟ್ಟರು.ಶುಕ್ರವಾರ ತಾಲೂಕಿನ ಚಿಕ್ಕಮಾಡಾಳು ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಲ್ಲೂರು ಪ್ರೌಢಶಾಲಾ ವಲಯಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ತುಂಬಾ ಸಹಕಾರಿಯಾಗಲಿವೆ. ಪ್ರತಿ ವಿದ್ಯಾರ್ಥಿಗಳು ಹಾಡಿ ಬೆಳೆದ, ಕಂಡ ಗ್ರಾಮೀಣ ಪ್ರದೇಶಗಳ ಜನಪದ ಕಲೆಗಳ ಪ್ರದರ್ಶನ ಮಾಡಲು ಉತ್ತಮ ವೇದಿಕೆಯಾಗಿದೆ ಎಂದರು.
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಾಚಾರ್ಯ ಎನ್.ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ, ಬೌದ್ಧಿಕ ಬೆಳವಣಿಗೆಗಾಗಿ ಸರ್ಕಾರ ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಬಳಕೆ ಮಾಡಿಕೊಂಡು ಮಕ್ಕಳು ಪ್ರಗತಿ ಹೊಂದಬೇಕೆಂದು ಹೇಳಿದರು.ಮುಖ್ಯ ಅತಿಥಿ, ಸಂಸ್ಕೃತ ಭಾಷಾ ಮುಖ್ಯಶಿಕ್ಷಕ ನರಸಿಂಹ ಭಟ್, ಶಿಕ್ಷಕರ ಸಂಘದ ಕಾರ್ಯದರ್ಶಿ ಮಹೇಶ್, ಹರೀಶ್ ಕುಮಾರ್, ಜೀವನ್, ತಿಮ್ಮಪ್ಪ, ಅಕ್ಷತಾ, ನಲ್ಲೂರು ವಲಯದ ಪ್ರೌಢಶಾಲಾ ಸಹಾ ಶಿಕ್ಷಕರು, ಸ್ಫರ್ಧಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
- - - -13ಕೆಸಿಎನ್‌ಜಿ2:ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಎಸ್.ಶಂಕರಪ್ಪ ಉದ್ಘಾಟಿಸಿದರು.