ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ

| Published : Nov 22 2025, 02:45 AM IST

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಅರ್ಹ ಮಕ್ಕಳನ್ನು ತಾಲೂಕು ಮಟ್ಟಕ್ಕೆ ಕಳುಹಿಸುವುದು ನಿರ್ಣಾಯಕರ ಜವಾಬ್ದಾರಿಯಾಗಿದೆ

ಕುಷ್ಟಗಿ: ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿವೆ ಎಂದು ಶಿಕ್ಷಣ ಸಂಯೋಜಕ ರಾಘಪ್ಪ ಶ್ರೀರಾಮ್ ಹೇಳಿದರು.

ತಾಲೂಕಿನ ಅಡವಿಭಾವಿ ಕ್ಲಸ್ಟರ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಡವಿಭಾವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆ ಗುರುತಿಸಿ ಅರ್ಹ ಮಕ್ಕಳನ್ನು ತಾಲೂಕು ಮಟ್ಟಕ್ಕೆ ಕಳುಹಿಸುವುದು ನಿರ್ಣಾಯಕರ ಜವಾಬ್ದಾರಿಯಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಅಯ್ಯಪ್ಪ ಸುರುಳ ಮಾತನಾಡಿ, ಪ್ರತಿಭೆ ಗುಡಿಸಿಲಿನಲ್ಲಿ ಹುಟ್ಟಿ ಅರಮನೆಯಲ್ಲಿ ಸಾಯುತ್ತೆ ಎನ್ನುವಂತೆ ನಮ್ಮ ಹಳ್ಳಿಯ ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜ್ವಲಿಸಲು ಇದು ಒಂದು ಸೂಕ್ತ ವೇದಿಕೆ ಎಂದರೆ ತಪ್ಪಾಗಲಾರದು ಎಂದರು.

ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಪರಶುರಾಮ ಹಂಚಿನಾಳ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲೋಕೇಶ್, ಹೊಸಳ್ಳಿ ಶಾಲೆಯ ಮುಖ್ಯ ಶಿಕ್ಷಕ ಶರಣಮ್ಮ ಎಂ. ಹಾಗೂ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಗುರುಗಳು ಹಾಗೂ ಎಸ್ಡಿಎಮ್ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಜರಿದ್ದರು.

ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶಿಕ್ಷಕ ಶಿವಕುಮಾರ್ ನಂದಾಪುರ ಸ್ವಾಗತಿಸಿದರು. ಮಹೇಶಗೌಡ ನಿರೂಪಿಸಿದರು, ಇಮಾಂಬಿ ವಂದಿಸಿದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.