ಸಾರಾಂಶ
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಪಠ್ಯೇತರ ಚಟುವಟಿಕೆಗಳ ಜತೆಗೆ ವಿವಿಧ ಜ್ಞಾನ ಕಲಿಯಬೇಕು
ಕುಷ್ಟಗಿ: ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ಕೌಶಲ್ಯ ಪ್ರತಿಭೆ ಪ್ರದರ್ಶನಕ್ಕೆ ಸಹಕಾರಿಯಾಗಿದೆ ಎಂದು ಬಿಇಒ ಉಮಾದೇವಿ ಬಸಾಪುರ ಹೇಳಿದರು.
ತಾಲೂಕಿನ ತಾವರಗೇರಾ ಪಟ್ಟಣದ ಶಶಿಧರ ಸ್ವಾಮಿ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಪಠ್ಯೇತರ ಚಟುವಟಿಕೆಗಳ ಜತೆಗೆ ವಿವಿಧ ಜ್ಞಾನ ಕಲಿಯಬೇಕು, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವುದರ ಜತೆಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಕೂಡ ಇಂತಹ ಕಾರ್ಯಕ್ರಮ ಅವಶ್ಯಕ ಎಂದು ಹೇಳಿದರು.ಸಿಆರ್ ಸಿ ಕಾಶಿನಾಥ್ ನಾಗಲಿಕರ ಮಾತನಾಡಿದರು, ಸಮಾರಂಭದ ಅಧ್ಯಕ್ಷತೆ ಮುಖ್ಯಗುರು ಪಂಪಾಪತಿ ಕೊರ್ಲಿ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಶಿಕ್ಷಣ ಸಂಯೋಜಕ ರಾಘಪ್ಪ ಶ್ರೀರಾಮ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮಹಾಂತಯ್ಯ ಸೊಪ್ಪಿಮಠ, ಸೋಮನಾಥ, ಬಸವರಾಜ್ ಮೇಟಿ, ಆರ್.ಜಿ. ಅಂಬಿಗೇರ, ಡಿ.ಆರ್. ಪಾಟೀಲ್, ಪ್ರಭಾಕರ ಅವರೆಡ್ಡಿ, ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಇತರರು ಇದ್ದರು. ಶಿಕ್ಷಕಿ ನಂದಿನಿ ಸ್ವಾಗತಿಸಿದರು, ಶಿಕ್ಷಕಿ ಮಂಜುಳಾ ಓಲಿ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))