ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಪ್ರೊ. ಸಂಕನೂರ

| Published : Jan 08 2024, 01:45 AM IST

ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಪ್ರೊ. ಸಂಕನೂರ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳಲ್ಲಿ ಪ್ರತಿಭೆಯನ್ನು ಹೊರ ತರುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಹೊಸದಾದ ಜೀವನ ಕೌಶಲ್ಯವನ್ನು ರೂಢಿಸಿಕೊಳ್ಳಲು ವೇದಿಕೆಯಾಗಿ ಜಿಲ್ಲಾ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಗದಗ: ಮಕ್ಕಳಲ್ಲಿ ಗುಪ್ತವಾದ ಪ್ರತಿಭೆಯನ್ನು ಹೊರ ತರುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಹೊಸದಾದ ಜೀವನ ಕೌಶಲ್ಯವನ್ನು ರೂಢಿಸಿಕೊಳ್ಳಲು ವೇದಿಕೆಯಾಗಿ ಜಿಲ್ಲಾ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ಲೊಯೊಲಾ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿ ವರ್ಷ ಇಲಾಖೆಯ ಯೋಜನಾ ಕಾರ್ಯಕ್ರಮದಡಿಯಲ್ಲಿ ರೂಪಿಸಿದ ವಿಸ್ತೃತ ಕಾರ್ಯಕ್ರಮದಡಿಯಲ್ಲಿ ಯೋಜಿಸಲಾದ ವಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಕಂಠಪಾಠ, ಧಾರ್ಮಿಕ ಪಠಣ, ಸಂಗೀತ ಕಥೆ ಹೇಳುವುದು, ಅಭಿನಯ ಗೀತೆ, ಭಾಷಣ, ನೃತ್ಯ ಕ್ವಿಜ್, ಕವಾಲಿ ಹೀಗೆ ಹತ್ತು ಹಲವಾರು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಏಕೈಕ ವೇದಿಕೆ ಪ್ರತಿಭಾ ಕಾರಂಜಿಯಾಗಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕೆಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ ವಿವಿಧ ತಾಲೂಕಗಳಿಂದ ಪ್ರಥಮ ಸ್ಥಾನ ಪಡೆದ ವಿಜೇತರಾದ ೨೫೦ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಇಂದಿನ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲಿದ್ದಾರೆ. ಆಗಮಿಸಿದ ವಿದ್ಯಾರ್ಥಿಗಳಿಗೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಚ್.ಕಡಿವಾಲ ಹಾಗೂ ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ.ಹಿರೇಮಠ ಮಾತನಾಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ. ಎಂ., ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಂ.ಎ. ಮಾಡಲಗೇರಿ, ಮುಂಡರಗಿ ಬಿಇಒ ಎಚ್.ಎಂ. ಫಡ್ನೇಸಿ, ಗ್ರಾಮೀಣ ಬಿಇಒ ಜಿ.ಎಂ. ಮುಂದಿನಮನಿ, ಎಸ್.ಡಿ. ಕನವಳ್ಳಿ, ಶಿಕ್ಷಣಾಧಿಕಾರಿ ಅಕ್ಷರ ದಾಸೋಹ ಕೊಟ್ರೇಶ ವಿಭೂತಿ, ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ, ಜಿ.ಡಿ. ದಾಸರ ಜೆ.ಎ. ಬಾವಿಕಟ್ಟಿ, ಎಚ್.ಎ. ಫಾರೂಖಿ, ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಚ್. ಕಡಿವಾಲ, ರಾ.ಸ.ನೌ. ಸಂಘದ ಕೆ.ಬಿ. ಕೊಣ್ಣೂರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ, ಎಂ.ಎಸ್ . ಕುಚಬಾಳ, ಬಿ.ಎಫ್. ಪೂಜಾರ, ಎಸ್.ಆರ್. ಬಂಡಿ, ಬಿ.ಕೆ. ನಿಂಬನಗೌಡರ, ರವಿ ಕೊಟಿಯವರ, ಆರ್.ಎಂ. ಶಿರಹಟ್ಟಿ, ಮಹೇಶ ಕುರಿ, ಲೊಯೊಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ್ ರೆನಿಟಾ ಪಿಂಟೊ, ಸಿಸ್ಟರ್ ಬೆನಿಗ್ನಾ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಇದ್ದರು. ಶಿವಾನಂದ ಗಿಡ್ನಂದಿ ನಿರೂಪಿಸಿಸಿದರು. ಎಂ.ಎ. ಮಾಡಲಗೇರಿ ವಂದಿಸಿದರು.