ಸಾರಾಂಶ
ಮಕ್ಕಳು ಭವಿಷ್ಯದಲ್ಲಿ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು.
ಸೊರಬ: ಮಕ್ಕಳು ಭವಿಷ್ಯದಲ್ಲಿ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು.
ತಾಲೂಕಿನ ಕಮರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಸಬಾ-ಬಿ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಮತ್ತು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರುವುದಕ್ಕಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು, ಜ್ಞಾನವನ್ನು ವಿಕಸನಗೊಳಿಸಲು ಮತ್ತು ಮನೋ ಉಲ್ಲಾಸ ಪಡೆಯಲು ಒಂದು ಪ್ರಮುಖ ವೇದಿಕೆಯಾಗಿದೆ ಎಂದರು.ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಕಲೆ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದರು.
ಕಾರ್ಯಕ್ರಮವನ್ನು ಬೆನ್ನೂರು ಗ್ರಾಪಂ ಅಧ್ಯಕ್ಷೆ ಯಶೋದಾ ಅಣ್ಣಪ್ಪ ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಶ್ ಅಧ್ಯಕ್ಷತೆ ವಹಿಸಿದ್ದರು.ಗ್ರಾಪಂ ಉಪಾಧ್ಯಕ್ಷ ಮಂಜುನಾಥ್, ಮಾಜಿ ಅಧ್ಯಕ್ಷ ಮಾರ್ಯಪ್ಪ, ಸದಸ್ಯರಾದ ವಿನಾಯಕ ಹೆಗಡೆ, ಸಣ್ಣಪ್ಪ, ಚಂದ್ರಕಲಾ, ಈರಮ್ಮ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿನಾಯಕ, ಕೃಷ್ಣ ಶೇಟ್, ಶಿವಾನಂದ್, ಧರ್ಮಪ್ಪ, ಕಾಮಪ್ಪ, ಸುರೇಶ್, ಉಮಾಪತಿ, ರತ್ನ, ಶಾರದ, ಶಾಲಾ ಮುಖ್ಯ ಶಿಕ್ಷಕ ಗುರುನಾಥ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಮರೂರು ಮುಖ್ಯ ಶಿಕ್ಷಕ ವಾಸುದೇವ್ ಸೇರಿದಂತೆ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))