ಪ್ರತಿಭಾ ಅನಾವರಣಕ್ಕೆ ವೇದಿಕೆ ಪ್ರತಿಭಾ ಕಾರಂಜಿ

| Published : Nov 07 2024, 12:02 AM IST

ಪ್ರತಿಭಾ ಅನಾವರಣಕ್ಕೆ ವೇದಿಕೆ ಪ್ರತಿಭಾ ಕಾರಂಜಿ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಿಗೆ ಮಾತ್ರವಿದೆ, ಶಿಕ್ಷಕರು ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವ ಅತಿ ಮುಖ್ಯ ಜವಾಬ್ದಾರಿ ಹೊಂದಿದ್ದಾರೆ. ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಶಾಲಾ ಮಕ್ಕಳಿಂದಲೇ ಆಗಬೇಕು,

ಕನ್ನಡಪ್ರಭ ವಾರ್ತೆ ಕೋಲಾರಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳ ಅಗತ್ಯವಿದ್ದು, ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು. ನಗರದ ಅಂಜುಮಾನ್ ಅಲಮಿನ್ ಶಾಲಾ ಆವರಣದಲ್ಲಿ ನಡೆದ ೨೦೨೪-೨೫ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.ಪ್ರತಿಭೆ ಅನಾವರಣಕ್ಕೆ ವೇದಿಕೆ

ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಶಾಲಾ ಮಕ್ಕಳಿಂದಲೇ ಆಗಬೇಕು, ಮಕ್ಕಳಲ್ಲಿ ಅಡಗಿರುವ ಕಲೆ ಹೊರ ಬರಲು ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ, ಕಲೋತ್ಸವ ನಡೆಸುತ್ತಿದೆ ಎಂದರು.ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಿಗೆ ಮಾತ್ರವಿದೆ, ಶಿಕ್ಷಕರು ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವ ಅತಿ ಮುಖ್ಯ ಜವಾಬ್ದಾರಿ ಹೊಂದಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಉಮಾ, ನೋಡಲ್ ಅಧಿಕಾರಿ ಕೆ.ಶ್ರೀನಿವಾಸ್, ನಗರಸಭೆ ಉಪಾಧ್ಯಕ್ಷೆ ಸಂಗೀತ ಜಗದೀಶ್, ಸದಸ್ಯ ಸಾಧಿಕ್‌ಪಾಷ, ಶಿಕ್ಷಣಾಧಿಕಾರಿ ಸಗೀರಾ ಅಂಜುಂ, ವಿಷಯ ಪರಿವೀಕ್ಷಕ ವೆಂಕಟೇಶಬಾಬು, ಕ್ಷೇತ್ರ ಸಮನ್ವಯಾಧಿಕಾರಿ ಶಶಿವಧನ, ರಾಜ್ಯ ಎಸ್ಸಿಎಸ್ಟಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್, ಜಿಲ್ಲಾಧ್ಯಕ್ಷ ಮುನಿಯಪ್ಪ, ಖಾಸಗಿ ಶಾಲೆಗಳ ಜಿಲ್ಲಾ ಉಪಾಧ್ಯಕ್ಷ ರವಿ ಮತ್ತಿತರರು ಇದ್ದರು.