ಪ್ರತಿಭೆ ಹೊರ ಹಾಕಲು ಪ್ರತಿಭಾ ಕಾರಂಜಿ ಪೂರಕ: ಗೀತಾ ಹರೀಶ್

| Published : Sep 22 2024, 01:48 AM IST

ಪ್ರತಿಭೆ ಹೊರ ಹಾಕಲು ಪ್ರತಿಭಾ ಕಾರಂಜಿ ಪೂರಕ: ಗೀತಾ ಹರೀಶ್
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್‌ ಮತ್ತು ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ದೇವರಾಜ್‌ ಉದ್ಘಾಟಿಸಿದರು. ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಪೂರಕ ವೇದಿಕೆಯಾಗಿದೆ ಎಂದು ಗಣ್ಯರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಶಿಕ್ಷಣ ಇಲಾಖೆ ವತಿಯಿಂದ ಶನಿವಾರಸಂತೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಶನಿವಾರಸಂತೆ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್ ಮತ್ತು ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಸತ್ಯವತಿ ದೇವರಾಜ್ ಉದ್ಘಾಟಿಸಿದರು. ಗೀತಾ ಹರೀಶ್ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ಪೂರಕ ವೇದಿಕೆಯಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ವೇದಿಕೆಯಲ್ಲಿ ತಮ್ಮ ಪ್ರತಿಭೆಗಳನ್ನು ಯಾವುದೆ ಹಿಂಜರಿಕೆ ಇಲ್ಲದೆ ಪ್ರದರ್ಶಿಸುವಂತೆ ಸಲಹೆ ನೀಡಿದರು.

ಶನಿವಾರಸಂತೆ ಕ್ಲಸ್ಟರ್ ಸಿಆರ್‍ಪಿ ಸಿ.ಕೆ.ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಶನಿವಾರಸಂತೆ ಕ್ಲಸ್ಟರ್ ಮಟ್ಟದಲ್ಲಿ ವಿವಿಧ 15 ಶಾಲೆಗಳಿಂದ 2 ಸಾವಿರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದು ಈ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸುಮಾರು 46 ಸ್ಪರ್ಧೆಗಳು ನಡೆಯುತ್ತದೆ ಎಂದರು.

ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಫ್ರಾನ್ಸಿಸ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಸಾಹಿತ್ಯ, ಕಲೆ, ನೃತ್ಯ ಇನ್ನು ಮುಂತಾದ ಪ್ರತಿಭೆಗಳಿರುತ್ತದೆ. ಆದರೆ ಇವನ್ನು ಹೊರ ಹಾಕುವುದಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದಿಸೆಯಲ್ಲಿ ಶಾಲಾ ಕಾಲೇಜು ಹಂತದಲ್ಲಿ ತನ್ನ ಪ್ರತಿಭೆಗಳನ್ನು ವೇದಿಕೆ ಮೂಲಕ ಪ್ರದರ್ಶಿಸುವಂತೆ ಸಲಹೆ ನೀಡಿದರು.

ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿದರು. ಸಮಾರಂಭದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ದೇವರಾಜ್, ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆ ಪ್ರಾಂಶುಪಾಲ ಟಿ.ಪಿ.ಶಿವಪ್ರಕಾಶ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್‍ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಭಾರತಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ನಿಡ್ತ ಸ.ಪ್ರೌ.ಶಾಲಾ ಮುಖ್ಯ ಶಿಕ್ಷಕಿ ನಳಿನಿ, ಹಂಡ್ಲಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಪ, ಸುಪ್ರಜ ಗುರುಕುಲ ಶಾಲಾ ಪ್ರಾಂಶುಪಾಲೆ ಡಿ.ಸುಜಲಾದೇವಿ, ಶಿಕ್ಷಕರಾದ ಪುಟ್ಟರಾಜು, ಕವಿತ, ಮಲ್ಲೇಶ್ ಸೆಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಮುಖ್ಯಸ್ಥ ಸಭಾಸ್ಟಿನ್ ಮೈಕಲ್ ಮುಂತಾದವರಿದ್ದರು.