ನಾಳೆ ಅಂಬರೀಶ್ ಫೌಂಡೇಷನ್‌ನಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ

| Published : May 28 2024, 01:15 AM IST

ನಾಳೆ ಅಂಬರೀಶ್ ಫೌಂಡೇಷನ್‌ನಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ
Share this Article
  • FB
  • TW
  • Linkdin
  • Email

ಸಾರಾಂಶ

ಡಾ.ಅಂಬರೀಶ್ ಫೌಂಡೇಷನ್ ಸಮಾಜಮುಖಿ ಕೈಂಕರ್ಯಗಳ ವೇದಿಕೆ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಅಂಬರೀಶ್‌ ಅವರ ಎಪ್ಪತ್ತೆರಡನೇ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಮೇ ೨೯ರಂದು ಮಧ್ಯಾಹ್ನ ೨.೩೦ ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಡಾ.ಅಂಬರೀಶ್ ಫೌಂಡೇಷನ್ ಸಮಾಜಮುಖಿ ಕೈಂಕರ್ಯಗಳ ವೇದಿಕೆ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಅಂಬರೀಶ್‌ ಅವರ ಎಪ್ಪತ್ತೆರಡನೇ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಮೇ ೨೯ರಂದು ಮಧ್ಯಾಹ್ನ ೨.೩೦ ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ತಿಳಿಸಿದರು.

ಸಂಸದೆ ಸುಮಲತಾ ಅಂಬರೀಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿ ಪ್ರೊ.ಎಸ್.ಶಂಕರಗೌಡ ಚಾಲನೆ ನೀಡುವರು. ಖ್ಯಾತ ಪಶು ವೈದ್ಯ ಡಾ.ಕೆ.ಎಸ್.ಜಯರಾಮ್, ಸಾವಯವ ಕೃಷಿಕ ರಂಗಶೆಟ್ಟಿ, ಶಿಕ್ಷಣ ಕ್ಷೇತ್ರದ ಸಾಧಕ ನಂಜರಾಜು ಹಾಗೂ ಸಾಂಪ್ರದಾಯಿಕ ಗ್ರಾಮೀಣ ಉತ್ಸವಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಜಾತ್ರಾ ಮಹೋತ್ಸವ ಸಮಿತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಶಿಕುಮಾರ್, ಅರುಣಕುಮಾರಿ, ಸತೀಶ್, ಜಯರಾಮ ,ಮಹೇಶ್, ಮಧು ಶಿವಲಿಂಗಯ್ಯ, ಪ್ರಸನ್ನ ಉಪಸ್ಥಿತರಿದ್ದರು.

ನಾಡಿದ್ದು ಬೃಹತ್ ಪ್ರತಿಭಟನಾ ಮೆರವಣಿಗೆ

ಕನ್ನಡಪ್ರಭ ವಾರ್ತೆ ಮಂಡ್ಯಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟದಿಂದ ಮೇ ೩೦ರಂದು ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರಾದ ಸುನಂದ ಜಯರಾಂ ತಿಳಿಸಿದರು.

ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಅಧಿಕಾರಿಯನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯರನ್ನು ನಿರ್ಲಕ್ಷವಾಗಿ ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ಅವರ ಹಲವು ಬಗೆಯ ಚಿತ್ರಣವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದು ಇದು ಘೋರ ಅಪರಾಧವಾಗಿದೆ. ಆದ್ದರಿಂದ ಈ ಲೈಂಗಿಕ ಹಗರಣದಲ್ಲಿ ಮಹಿಳೆಯರ ಮೇಲೆ ನಡೆಸಿರುವ ಲೈಂಗಿಕ ಹಲ್ಲೆ ಅತ್ಯಾಚಾರ ಮತ್ತು ಹಿಂಸಾಚಾರಕ್ಕೆ ಪ್ರತಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಅಂದು ಹಾಸನದ ಹೇಮಾವತಿ ಪ್ರತಿಮೆಯ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು ಜೊತೆಗೆ ಬೃಹತ್ ಬಹಿರಂಗ ಸಭೆಯನ್ನು ನಡೆಸಲಾಗುವುದು. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ದೇವಿ, ಗುರುಪ್ರಸಾದ್ ಕೆರಗೋಡು, ಪುಟ್ಟವಾದು, ಸಿ ಕುಮಾರಿ, ಪೂರ್ಣಿಮಾ, ಸುನೀತಾ ಇತರರಿದ್ದರು.