ನಗರಸಭೆ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

| Published : Nov 21 2024, 01:04 AM IST

ಸಾರಾಂಶ

ಉಡುಪಿ ನಗರಸಭೆ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನಗರಸಭೆ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪೌರಕಾರ್ಮಿಕರಾದ ಬದ್ದು ನಾಯ್ಕ್ ಮತ್ತು ಗೀತಾ ಬಾಯಿ ದಂಪತಿಯ ಮಗಳು ಬಿ.ಎಸ್. ಸುನೀತಾ ಹಾಗೂ ಕಂಡ್ಯಾ ನಾಯ್ಕ್ ಮತ್ತು ವೇದಾವತಿ ದಂಪತಿಯ ಮಗ ವಿಷ್ಣು ನಾಯ್ಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಈ ಸಂದರ್ಭ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ ಡಾ. ಉದಯ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಪರಿಸರ ಅಭಿಯಂತರರಾದ ಸ್ನೇಹಾ ಕೆ.ಎಸ್. ಹಾಗೂ ನಗರಸಭೆಯ ಆರೋಗ್ಯ ನಿರೀಕ್ಷಕರು, ನಗರಸಭೆಯ ಸದಸ್ಯರು ಮತ್ತು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.