28ರಂದು ನೇಕಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

| Published : Jul 03 2024, 12:18 AM IST

ಸಾರಾಂಶ

ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ ಇದೇ ಜು.28 ರಂದು ನಗರದ ಎಸ್.ಕೆ.ಪಿ ರಸ್ತೆಯ ಶ್ರೀ ಮಾರ್ಕಂಡೇಶ್ವರ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಹೆಚ್ಚಿನ ಅಂಕಗಳಿಸಿ ಉತ್ತೀರ್ಣರಾದ ಪದ್ಮಶಾಲಿ (ನೇಕಾರ) ಜನಾಂಗದ ಕುಲಭಾಂದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ಶ್ರೀನಿವಾಸ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದಿಂದ ಇದೇ ಜು.28 ರಂದು ನಗರದ ಎಸ್.ಕೆ.ಪಿ ರಸ್ತೆಯ ಶ್ರೀ ಮಾರ್ಕಂಡೇಶ್ವರ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಹೆಚ್ಚಿನ ಅಂಕಗಳಿಸಿ ಉತ್ತೀರ್ಣರಾದ ಪದ್ಮಶಾಲಿ (ನೇಕಾರ) ಜನಾಂಗದ ಕುಲಭಾಂದವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಜಿ.ಶ್ರೀನಿವಾಸ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜು.28ರ ಬೆಳಿಗ್ಗೆ 10 ಗಂಟೆಗೆ ಶ್ರೀ ಪ್ರಭುಲಿಂಗ ಸ್ವಾಮಿಗಳು ದೀಪ ಬೆಳಗಿಸಲಿದ್ದು, ಡಾ.ಬಿ.ನಂಬಿಯಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮಾಜದ ಅಧ್ಯಕ್ಷ ಪಿ.ಜೆ.ನಾಗರಾಜ, ಸೇಪೂರ್ ಆನಂದ್ ಹಾಗೂ ಜೆ.ಟಿ.ರಾಮಕೃಷ್ಣ ಉಪಸ್ಥಿತರಿರುವರು ಎಂದರು.

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇ.80 ಕ್ಕೂ ಹೆಚ್ಚು ಅಂಕಗಳಿಸಿದ ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಜೊತೆಗೆ ಬೆಳಿಗ್ಗೆ 10 ರಿಂದ 11 ರವರೆಗೆ ರಂಗೋಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಡಿ.ಎಸ್. ಶ್ರೀನಿವಾಸ, ಮಾರ್ಕಂಡೇಯ ಇ. ನರಾಲ್, ಹಾಗೂ ಪಿ.ರುದ್ರೇಶ್ ಇದ್ದರು.

----2ಕೆಡಿವಿಜಿ38

ದಾವಣಗೆರೆಯಲ್ಲಿ ಪದ್ಮಶಾಲಿ ಜನಾಂಗದ ಕುಲಬಾಂಧವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿರುವ ಕುರಿತು ಪಿ.ಜಿ.ಶ್ರೀನಿವಾಸ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.