ಮೇ 20ರಂದು ಪ್ರತಿಭಾ ಪುರಸ್ಕಾರ, ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಡಾ.ವೈ.ಪಿ.ಧರ್ಮೇಂದ್ರ

| Published : May 15 2025, 02:00 AM IST

ಮೇ 20ರಂದು ಪ್ರತಿಭಾ ಪುರಸ್ಕಾರ, ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಡಾ.ವೈ.ಪಿ.ಧರ್ಮೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಶಿಬಿರದಲ್ಲಿ ಹೃದ್ರೋಗ ತಪಾಸಣೆ, ನರರೋಗ ತಪಾಸಣೆ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾoಗ, ಕ್ಯಾನ್ಸರ್, ದಂತ ವೈದ್ಯ ತಪಾಸಣೆ, ಕೀಲು ಹಾಗೂ ಮೂಳೆ ರೋಗದ ತಪಾಸಣೆ, ಗರ್ಭಕೋಶ ಹಾಗೂ ಮಹಿಳಾ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಶ್ರೀಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಕಚೇರಿ ಆವರಣದಲ್ಲಿ ಮೇ 20ರಂದು ಪ್ರತಿಭಾ ಪುರಸ್ಕಾರ ಹಾಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ವೈ.ಪಿ.ಧರ್ಮೆಂದ್ರ ತಿಳಿಸಿದರು.

ಪಟ್ಟಣದ ಶ್ರೀಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಹಾಗೂ ಮಲ್ಲಿಕಾರ್ಜುನ ಅಭಿಮಾನಿ ಬಳಗ ಮತ್ತು ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ ಸಮಾಜಸೇವಕ ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಅಂಗವಾಗಿ ಶಿಬಿರವನ್ನು ಆಯೋಜಿಸಿದೆ ಎಂದರು.

ಆದಿಚುಂಚನಗಿರಿ ಆಸ್ಪತ್ರೆ, ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಮಿಂಟೋ ಕಣ್ಣಿನ ಆಸ್ಪತ್ರೆ, ಕೆಂಪೇಗೌಡ ದಂತ ಆಸ್ಪತ್ರೆಗಳ ಸಹಯೋಗದಲ್ಲಿ ತಜ್ಞ ವೈದ್ಯರ ನೇತೃತ್ವದಲ್ಲಿ ಬೃಹತ್ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷದ ವಿತರಣೆ ಮಾಡಲಾಗುವುದು ಎಂದರು.

ಶಿಬಿರದಲ್ಲಿ ಹೃದ್ರೋಗ ತಪಾಸಣೆ, ನರರೋಗ ತಪಾಸಣೆ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾoಗ, ಕ್ಯಾನ್ಸರ್, ದಂತ ವೈದ್ಯ ತಪಾಸಣೆ, ಕೀಲು ಹಾಗೂ ಮೂಳೆ ರೋಗದ ತಪಾಸಣೆ, ಗರ್ಭಕೋಶ ಹಾಗೂ ಮಹಿಳಾ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು ಎಂದರು.

ತಾಲೂಕಿನ ಸಾರ್ವಜನಿಕರು ಹಾಗೂ ರೈತರು ತಜ್ಞ ವೈದ್ಯರಿಂದ ದೊರೆಯುತ್ತಿರುವ ಉಚಿತ ಆರೋಗ್ಯ ಸೇವೆ ಪಡೆದುಕೊಂಡು ಆರೋಗ್ಯವಂತ ಬದುಕು ನಡೆಸಬೇಕು ಎಂದರು.

ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕ, ಪದವಿ ಪರೀಕ್ಷೆಯಲ್ಲಿ ಶೇ.80 ರಷ್ಟು ಅಂಕ ಪಡೆದ ಇನಿಯರಿಂಗ್ ಪದವೀಧರರು ತಮ್ಮ ಮೂಲ ಅಂಕಗಳ ಜೆರಾಕ್ಸ್, ಆಧಾರ್ ಹಾಗೂ ಪಾಸ್ ಪೋರ್ಟ್ ಅಳತೆ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಟ್ರಸ್ಟ್ ಗೌರವಾಧ್ಯಕ್ಷ ಜಯರಾಮ್ ನೆಲ್ಲಿತ್ತಾಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆದಿಚುಂಚನಗಿರಿ ಆಸ್ಪತ್ರೆ ತಜ್ಞ ವೈದ್ಯರಾದ ಡಾ.ಜಿ.ಎನ್. ಸೋಮಶೇಖರ್, ವೈ.ಎಸ್. ಶಿವಕುಮಾರ್, ಟಿ.ಎಸ್. ಪಾಂಡು, ಕಸಾಪ ಅಧ್ಯಕ್ಷ ಪೂರ್ಣ ಚಂದ್ರ ತೇಜಸ್ವಿ, ಸಮಾಜಸೇವಕ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.