ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ
ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡಾಕೂಟವನ್ನು ಡಿಸೆಂಬರ್ ತಿಂಗಳಲ್ಲಿ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ತಿಳಿಸಿದರು.ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಗುವುದು.
ವಿದ್ಯಾರ್ಥಿಗಳು ಆಧಾರ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೊ ಜೊತೆಗೆ ಕೈಬರಹದ ಅರ್ಜಿಯೊಂದಿಗೆ, ಅಂಕಪಟ್ಟಿಯನ್ನು ಲಗತ್ತಿಸಿ ನವೆಂಬರ್ 30 ರ ಒಳಗಾಗಿ ಕಳುಹಿಸಿಕೊಡಬೇಕಿದೆ. ಡಿ.25 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂತೆಯೇ ಸಮುದಾಯ ಬಾಂಧವರಿಗೆ ಡಿ.22 ರಂದು ಕುಶಾಲನಗರದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ #541, 4ನೇ ಬ್ಲಾಕ್, ಶಿವರಾಮಕಾರಂತ ಬಡಾವಣೆ, ಕುಶಾಲನಗರ ಇಲ್ಲಿಗೆ ಅಂಚೆ ಮೂಲಕ ಅಥವಾ ಸೋಮವಾರಪೇಟೆಯಲ್ಲಿ ಯುವರಾಜ-9449128234, ನಾಗೇಶ್-9448346193, ಕೊಡ್ಲಿಪೇಟೆಯಲ್ಲಿ ಪ್ರವೀಣ್-9448167231, ಮಮತ-9448537688, ಶನಿವಾರಸಂತೆಯಲ್ಲಿ ಉದಯಕುಮಾರ್-6363058245, ತೊರೆನೂರು ಚಂದ್ರಪ್ಪ ಹೆಚ್.ಬಿ-9449514897, ವಿರಾಜಪೇಟೆಯಲ್ಲಿ ರಾಜೇಶ್-9483110979, ಅನುರಾಧ-948025194 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ಘಟಕದ ಗೌರವಾಧ್ಯಕ್ಷರಾದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ ಏರ್ಪಡಿಸಲಾಗಿದೆ. ಸಂಘಟನೆ ನಿಟ್ಟಿನಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ವರ್ಷ ಇದೊಂದು ಮಾದರಿ ಕಾರ್ಯಕ್ರಮವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸಭೆಯ ತೀರ್ಮಾನದಂತೆ ಡಿಸೆಂಬರ್ ತಿಂಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಸಮುದಾಯ ಪ್ರತಿಭಾವಂತ ವಿದ್ಯಾರ್ಥಿಗಳು ತಮಗೆ ದೊರೆತ ಈ ಅವಕಾಶ ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಕರೆ ನೀಡಿದರು.ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಎಸ್.ಎಸ್.ಸುರೇಶ್ ಮಾಯಮುಡಿ, ಪ್ರವೀಣ್ ಹೆಚ್.ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ, ಖಜಾಂಚಿ ಹೆಚ್.ಪಿ.ಉದಯಕುಮಾರ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಆದರ್ಶ್ ಕೆ.ಪಿ, ಕುಶಾಲನಗರ ತಾಲೂಕು ಅಧ್ಯಕ್ಷ ಎಚ್.ಎಂ.ಮಧುಸೂದನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ರಾಜೇಶ್, ನಿರ್ದೇಶಕರು ಇದ್ದರು.