ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರಹಾಕಲು ಪ್ರತಿಭಾಕಾರಂಜಿ ಸಹಕಾರಿ

| Published : Aug 10 2024, 01:31 AM IST

ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರಹಾಕಲು ಪ್ರತಿಭಾಕಾರಂಜಿ ಸಹಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

Pratibhakanji is helpful in bringing out the hidden talent in children

-ಕುರುಬರಹಳ್ಳಿಯಲ್ಲಿ ನಡೆದ ಪ್ರತಿಭಾ ಕಾರಂಜಿ ಉದ್ಘಾಟನೆ

------

ಹೊಸದುರ್ಗ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾಕಾರಂಜಿ ಸಹಕಾರಿಯಾಗಲಿದ್ದು, ಇಂತಹ ಅವಕಾಶಗಳನ್ನು ಪೋಷಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಿಆರ್ ಪಿಎಚ್ಆರ್ ಮಂಜುನಾಥ್ ತಿಳಿಸಿದರು.

ಶ್ರೀರಾಂಪುರ ಹೋಬಳಿಯ ಕುರುಬರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗವಿರಂಗಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ರಾಮೀಣ ಮಕ್ಕಳಲ್ಲಿ ಹಲವು ಪ್ರತಿಭೆಗಳು ಅಡಕವಾಗಿರುತ್ತವೆ, ಅವುಗಳನ್ನು ಹೊರಹಾಕಲು ಸೂಕ್ತ ವೇದಿಕೆಗಳ ಕೊರತೆ ಇದೆ. ಸರ್ಕಾರ ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿ ಎನ್ನುವ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ ಎಂದರು.

ಶಿಕ್ಷಣ ಕೇವಲ ನಾಲ್ಕು ಗೋಡೆಯ ಮಧ್ಯದ ಪಠ್ಯ ಚಟುವಟಿಕೆ ಆಗಬಾರದು. ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳ ಮೂಲಕ ನಮ್ಮ ನೆಲ ಸಂಸ್ಕೃತಿಯ ಸಂಸ್ಕಾರವನ್ನು ನೀಡುವಂತಹ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪಾಠದ ಜೊತೆಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಮಂಜುನಾಥ್ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ಹರೀಶ್ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಸುಡುಗಾಡನ ಪಾಳ್ಯದ ಶಿಕ್ಷಕರಾದ SE ಗಿರೀಶ ಜಯಣ್ಣ ಬಿ ರಘು ತೀರ್ಪುಗಾರರಾದ ಗೀತಪ್ರಿಯ ಇದ್ದರು. ಗವಿರಂಗಾಪುರ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮುಖ್ಯಶಿಕ್ಷಕ ಸಹ ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು.

ಮು. ಶಿ ಜಯಮ್ಮ ಸ್ವಾಗತಿಸಿ, ಶಿಕ್ಷಕ ಹಳದಪ್ಪ ಕಾರ್ಯಕ್ರಮ ನಿರೂಪಿಸಿದರು.------

ಫೋಟೋ: 9hsd11: ಕುರುಬರಹಳ್ಳಿಯಲ್ಲಿ ನಡೆದ ಪ್ರತಿಭಾ ಕಾರಂಜಿಯನ್ನು ಗಣ್ಯರು ಉದ್ಘಾಟಿಸಿದರು.