ಪುತ್ತೂರು ದೇವಳದಲ್ಲಿ ಪ್ರತಿಷ್ಠಾ ಬಂಡಿ ಉತ್ಸವ, ವರ್ಧಂತ್ಯುತ್ಸವ

| Published : May 15 2025, 01:33 AM IST

ಸಾರಾಂಶ

ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ನಡೆಯಿತು.ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ., ಈಶ್ವರ ಬೆಡೇಕರ್, ನಳಿನಿ ಪಿ. ಶೆಟ್ಟಿ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕರುಣಾಕರ ರೈ ದೇರ್ಲ, ರಾಮದಾಸ್ ಗೌಡ, ಶೇಖರ್ ನಾರಾವಿ, ಮಾಜಿ ಆಡಳಿತ ಮೊಕ್ತಸರ ಎನ್.ಕೆ.ಜಗನ್ನಿವಾಸ ರಾವ್, ಮಾಜಿ ಮೊಕೇಸರ ಚಿದಾನಂದ ಬೈಲಾಡಿ, ಹಿರಿಯರಾದ ಕಿಟ್ಟಣ್ಣ ಗೌಡ, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.