ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ರಂಗ ಪೂಜಾ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿವಪ್ರಸಾದ್ ತಂತ್ರಿಗಳ ನೇತೃತ್ವದಲ್ಲಿ ಪ್ರಾತಃಕಾಲ ಸಾಮೂಹಿಕ ಪ್ರಾರ್ಥನೆ, ತೋರಣ ಪ್ರತಿಷ್ಠೆ ಪುಣ್ಯಾಹ, ಪಂಚಗವ್ಯ, ಗಣಹೋಮ, ಕಲಶಾಧಿವಾಸ ಹೋಮ, ಬೆಳಗ್ಗೆ ಶ್ರೀ ದೇವರಿಗೆ ಕಲಶಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಶ್ರೀದೇವರ ಉತ್ಸವ ಬಲಿ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಪಾದೆಮನೆ ಜಯಂತ ರೈ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ ಕೊಲ್ನಾಡು ಗುತ್ತು, ಮೊಕ್ತೇಸರ ಶೇಖರ ಬಿ. ಶೆಟ್ಟಿ, ಕಾರ್ಯದರ್ಶಿ ಅನಂತರಾಮ ರಾವ್, ಕೋಶಾಧಿಕಾರಿ ಬಿ. ರತ್ನಾಕರ ಶೆಟ್ಟಿಗಾರ್, ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.ರಾತ್ರಿ ಶ್ರೀ ದೇವರಿಗೆ ರಂಗ ಪೂಜೆ, ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ರಾಜಾಂಗಣ ಪ್ರಸಾದ ವಿತರಣೆ ನಡೆಯಿತು.
-----------------------------------------------ಹೊಯ್ಗೆಗುಡ್ಡೆ ಶ್ರೀ ಉಮಾಮೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ
ಕನ್ನಡಪ್ರಭವಾರ್ತೆ ಮೂಲ್ಕಿಪಡುಪಣಂಬೂರು ಹೊಯ್ಗೆಗುಡ್ಡೆ ಶ್ರೀ ಉಮಾಮೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ವಿಜೃಂಭಣೆಯಿಂದ ನಡೆಯಿತು.ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಬೆಳಗ್ಗೆ ಮೀನ ಲಗ್ನ ಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ, ರುದ್ರ ಯಾಗ, ಅಲಂಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮಹಾಮಂತ್ರಾಕ್ಷತೆ, ರಾತ್ರಿ ಶ್ರೀ ದೇವರಿಗೆ ಮಹಾಪೂಜೆ, ರಂಗ ಪೂಜೆ, ಅಂಕುರಾರೋಹಣ, ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿತು.ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ರಂಗನಾಥ ಭಟ್, ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಡಾ ಹರಿಕೃಷ್ಣ ಪುನರೂರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಮದಾಸ್ ಪುತ್ರನ್ ಚಿತ್ರಾಪು ಮತ್ತಿತರರು ಉಪಸ್ಥಿತರಿದ್ದರು.