ಸಾರಾಂಶ
ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಬಂಟ್ವಾಳ: ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುತ್ವದ ಅವಹೇಳನ, ದೇವರ ನಿಂದನೆ ಧರ್ಮವಿರೋಧಿ ಹೇಳಿಕೆ ಕೊಟ್ಟು ರಾಷ್ಟ್ರೀಯತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ, ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಪೊಳಲಿ ಗಿರಿ ಪ್ರಕಾಶ್ ತಂತ್ರಿ, ಗೋಪಾಲ್ ಕುತ್ತಾರ್, ಪುನೀತ್ ಅತಾವರ, ಗುರು ಪ್ರಸಾದ್ ಉಳ್ಳಾಲ. ಹರ್ಷಿತ್, ಇವರ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕರಾದ ಶ್ರೀ ಪದ್ಮನಾಭ ಭಟ್ ಇವರ ಮೂಲಕ ದೇವರ ಮುಂದೆ ನಿವೇದಿಸಿಕೊಂಡು ಪ್ರಾರ್ಥಿಸಲಾಯಿತು.