ಸಾರಾಂಶ
ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.ಈ ಸಂದರ್ಭ ಮಾಜಿ ಸೈನಿಕ ವಿಶ್ವನಾಥ್ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಹೆಗ್ಡೆ, ರಾಘವ ದೇವಾಡಿಗ, ಮಾಜಿ ಸದಸ್ಯೆ ಶಶಿಕಲಾ ಭಟ್, ಸದಸ್ಯ ದೀಕ್ಷಿತ್ ಶೆಟ್ಟಿ, ಅಜಿತ್ ಎಳ್ಳಾರೆ, ಶೇಖರ್ ಎಳ್ಳಾರೆ, ರಶಿಕ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.