ದೇಶ ಒಳಿಗೆ ಪ್ರಾರ್ಥನೆ ಶ್ರೀರಾಮನಿಗೆ ಪ್ರಾರ್ಥನೆ

| Published : Jan 23 2024, 01:45 AM IST

ದೇಶ ಒಳಿಗೆ ಪ್ರಾರ್ಥನೆ ಶ್ರೀರಾಮನಿಗೆ ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಗಾಂಧಿ ಮಂದಿರದಲ್ಲಿ ಶ್ರೀರಾಮನ ಭಾವಚಿತ್ರ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ವಿಶೇಷ ಪೂಜೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿ ದೇಶಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ಸಾಗರ ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರ ಕಾಂಗ್ರೆಸ್ ವತಿಯಿಂದ ಗಾಂಧಿ ಮಂದಿರದಲ್ಲಿ ಶ್ರೀರಾಮನ ಭಾವಚಿತ್ರ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ವಿಶೇಷ ಪೂಜೆ ನಡೆಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಈ ಸಂದರ್ಭ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿ ದೇಶಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.

ಮಹಾತ್ಮಾ ಗಾಂಧೀಜಿ ರಾಮನ ಪರಮಭಕ್ತರಾಗಿದ್ದರು. ರಾಮರಾಜ್ಯ ಸ್ಥಾಪನೆ ಕನಸು ಕಂಡಿದ್ದರು. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ರಾಮಭಜನೆ ಸಾಮೂಹಿಕವಾಗಿ ನಡೆಸುತ್ತಿದ್ದರು. ಅವರಿಗೆ ಗುಂಡೇಟು ಬಿದ್ದ ಕೊನೆ ಕ್ಷಣದಲ್ಲೂ ಅವರು ಹೇ ರಾಮ್ ಎಂದೇ ಪ್ರಾಣಬಿಟ್ಟರು. ಇದು ಮಹಾತ್ಮಾ ಗಾಂಧೀಜಿ ಅವರು ಎಂತಹ ದೈವಭಕ್ತರಾಗಿದ್ದರು ಮತ್ತು ಶ್ರೀರಾಮನ ಆದರ್ಶವನ್ನು ತಮ್ಮ ಹೃದಯಾಂತರಾಳದಿಂದ ಹೇಗೆ ಗೌರವಿಸುತ್ತಿದ್ದರು ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಐ.ಎನ್. ಸುರೇಶಬಾಬು, ಚೇತನರಾಜ್ ಕಣ್ಣೂರು, ಜ್ಯೋತಿ ಕೋವಿ, ಅನಿತಾ ಕುಮಾರಿ, ಮಹಾಬಲ ಕೌತಿ, ಸೋಮಶೇಖರ ಲ್ಯಾವಿಗೆರೆ, ಮಧುಮಾಲತಿ, ಪರಿಮಳ, ಗಣಪತಿ ಮಂಡಗಳಲೆ, ಉಮೇಶ್, ಆನಂದ ಭೀಮನೇರಿ, ಮೈಕೆಲ್ ಡಿಸೋಜ, ದಿನೇಶ್ ಡಿ., ಅಶೋಕ ಬೇಳೂರು, ಚಿನ್ಮಯ್, ನಾಗರತ್ನ ಇನ್ನಿತರರು ಹಾಜರಿದ್ದರು.

- - -

-22ಕೆ.ಎಸ್.ಎ.ಜಿ.2:

ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರೀರಾಮ ಹಾಗೂ ಗಾಂಧೀಜಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.