ದೇವರಾಜ್‌ ಅರಸು ಜಯಂತಿ ಪೂರ್ವ ಸಿದ್ದತಾ ಸಭೆ

| Published : Aug 12 2025, 12:30 AM IST

ಸಾರಾಂಶ

ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ದೇವನಹಳ್ಳಿಯ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ದೇವನಹಳ್ಳಿಯ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಗಳಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಕೂಡ ಒಬ್ಬರು, ಅವರ ಜನ್ಮದಿನಾಚರಣೆಯನ್ನು ಆಗಸ್ಟ್ 20ರಂದು ಬೆಳಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ದೇವರಾಜ ಅರಸು ಭವನದವರೆಗೆ ದೇವರಾಜ ಅರಸು ಭಾವಚಿತ್ರ ರಥಯಾತ್ರೆ ಹೊರಡಲಿದೆ. ನಂತರ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದರು.

ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಿರಿಯ ಕಲಾವಿದರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಉಪನ್ಯಾಸವಿರಲಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಹಾಸ್ಟೆಲ್ ಗಳಲ್ಲಿ, ತಾಲೂಕು ಮಟ್ಟದಲ್ಲಿ ದೇವರಾಜ ಅರಸು ಜಯಂತಿ ಆಚರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿನೋದ ಬಿ ಮುಗಳಿ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗಗಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

11ಕೆಡಿಬಿಪಿ2-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಡಿ.ದೇವರಾಜ್‌ ಅರಸು ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.