ಸಾರಾಂಶ
- 530 ವಿದ್ಯಾರ್ಥಿಗಳ ಹೆಸರು ನೋಂದಣಿ । ಪ್ರಾಂಶುಪಾಲರು, ಅಧಿಕಾರಿಗಳು ಭಾಗಿ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಮಾ.1ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಪಟ್ಟಣದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಹಾಗೂ ನ್ಯಾಮತಿ ಪಟ್ಟಣದ ಕೆಪಿಎಸ್ ಕಾಲೇಜಿನ ಕೇಂದ್ರಗಳಲ್ಲಿ ಪರೀಕ್ಷೆಗೆ ಶುಕ್ರವಾರ ಪೂರ್ವತಯಾರಿ ಮಾಡಿಕೊಳ್ಳಲಾಯಿತು.ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು, ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು, ಸಾಸ್ವೆಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಅರಬಗಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಚೀಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 530 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ಪಟ್ಟಣದ ಶ್ರೀ ಚನ್ನೇಶ್ವರ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು, ಹೊನ್ನಾಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಸಾಸ್ವೆಹಳ್ಳಿ ಎಡಿವಿಎಸ್ ಕಾಲೇಜು, ಹೊನ್ನಾಳಿ ಪಟ್ಟಣದ ಎಂ.ಎಸ್.ಪಿ ಪದವಿಪೂರ್ವ ಕಾಲೇಜಿನ ಒಟ್ಟು 286 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.ನ್ಯಾಮತಿ ಪಟ್ಟಣದ ಕೆಪಿಎಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೆಪಿಎಸ್ ಕಾಲೇಜು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಜೀನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಸೌಳಂಗ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಬೆಳಗುತ್ತಿ ಎನ್‌ಇಎಸ್ ಪದವಿಪೂರ್ವ ಕಾಲೇಜಿನ ಒಟ್ಟು 422 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ಕ್ರಮವಾಗಿ ಹೊನ್ನಾಳಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಾಮಚಂದ್ರಪ್ಪ, ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದ ಮುಖ್ಯಸ್ಥೆ ಲೀನಾ ಹಾಗೂ ನ್ಯಾಮತಿ ಕೆಪಿಎಸ್ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ಮಾಹಿತಿ ನೀಡಿದರು. ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖಾಧಿಕಾರಿಗಳು ತಿಳಿಸಿದರು.
- - - -28ಎಚ್.ಎಲ್.ಐ2:ಶನಿವಾರದಿಂದ ಆರಂಭಗೊಳ್ಳಲಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹೊನ್ನಾಳಿ ಪಟ್ಟಣದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕಾಲೇಜು ಸಿಬ್ಬಂದಿ ಪೂರ್ವತಯಾರಿ ನಡೆಸಿದರು.