ಸಾರಾಂಶ
ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಪದವಿ ಪೂರ್ವ ಶಿಕ್ಷಣದ ಅವಧಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ನಾಂದಿ ಹಾಡುವ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಹೇಳಿದ್ದಾರೆ.ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಏಕಾಗ್ರತೆಯಿಂದ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಯಶಸ್ಸು ಗಳಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಾಧನಾ ಶಿಖರ ಏರಬೇಕು. ಪೋಷಕರು ನಿಮ್ಮ ಮೇಲೆ ಇಟ್ಟಿರುವ ಭರವಸೆ ಈಡೇರಿಬೇಕು. ಅವರ ತ್ಯಾಗ ಗೌರವಿಸಬೇಕು ಎಂದು ಕರೆ ನೀಡಿದರು.ಪ್ರಾಂಶುಪಾಲೆ ಶ್ರೀಲತಾ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀಡುವಂತೆ ಅಧ್ಯಯನಕ್ಕೂ ಆದ್ಯತೆ ಮೇರೆಗೆ ಪ್ರಾಮುಖ್ಯತೆ ನೀಡಬೇಕೆಂದರು.ಪಿಯುಸಿ ವ್ಯಾಸಂಗ ಸಮರ್ಪಕವಾಗಿ ಮಾಡಿ ಕಾಲೇಜಿಗೆ ಉತ್ತಮ ಫಲಿತಾಂಶ ಲಭ್ಯವಾಗುವಂತೆ ಮಾಡಿ ಪೋಷಕರಿಗೂ, ತಾವು ಓದಿದ ಕಾಲೇಜಿಗೂ ಕೀರ್ತಿ ತಂದುಕೊಡಬೇಕೆಂದರು.ಕ್ರೀಡಾ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಜಯ ಗಳಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.ಕಳೆದ ಸಾಲಿನಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು. ವಿದ್ಯಾರ್ಥಿನಿ ಶಿಫಾ ಸ್ವಾಗತಿಸಿದರು. ಕಿಶೋರ್ ನಿರೂಪಿಸಿದರು. ಪಲ್ಲವಿ ವಂದಿಸಿದರು.