ದೇವನಹಳ್ಳಿ: ಜಿ ರಾಮ್ ಜೀ ಮಸೂದೆ ಪಾವಸ್‌ಗೆ ಆಗ್ರಹಿಸಿ ಫೆ.೨೩ರಂದು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ಹಾಗೂ ಸಮಾವೇಶದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಇತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲೂಕಿನ ಕನ್ನಮಂಗಲ ಗೇಟ್ ಬಳಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆ ಮರುನಾಮಕರಣದ ನಿರ್ಧಾರದ ವಿರುದ್ಧ ಕಾನೂನು ಹೋರಾಟ ಮಾಡಲು ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಡಿ.೧೭ರಂದು ಕೇಂದ್ರ ಸರ್ಕಾರ ಮನರೇಗಾ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಮರುನಾಮಕರಣಗೊಳಿಸಿದ್ದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಯೋಜನೆಗಳ ಹೆಸರು ಬದಲಿಸುವುದೆ ಸಾಧನೆಯಾಗಿದೆ. ಕೇಂದ್ರದಲ್ಲಿದ್ದಾಗ ರಾಜ್ಯದ ಸಣ್ಣ ಅತಿ ಸಣ್ಣ ರೈತರ ಸುಮಾರು ೭೨ ಸಾವಿರ ಕೋಟಿ ರು. ಸಾಲ ಮನ್ನಾ ಮಾಡಿದೆ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನಮ್ಮ ರಾಜ್ಯದಿಂದ ಸುಮಾರು ೪ ಲಕ್ಷ ಕೋಟಿ ಜಿಎಸ್ಟಿ ಕಟ್ಟುತ್ತಿದ್ದು, ಕೇಂದ್ರ ನಮಗೆ ತೆರಿಗೆ ವಿತರಣೆಯಲ್ಲಿಯೂ ಅನ್ಯಾಯ ಮಾಡುತ್ತಿದೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆಯುವಷ್ಟು ಕೀಳು ಮಟ್ಟಕ್ಕೆ ಇಳಿದಿದೆ ಎಂದರು.ಇದೆ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಸಿ.ಮಂಜುನಾಥ್, ವೆಂಕಟೇಶ್, ರವಿಸಿದ್ದಪ್ಪ, ಬಯಪ ಅಧ್ಯಕ್ಷ ಶಾಂತಕುಮಾರ್ ನಿರ್ದೇಶಕರಾದ ಪ್ರಸನ್ನಕುಮಾರ್, ಮಂಜುನಾಥ್, ರಾಮಚಂದ್ರಪ್ಪ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಶ ಸಿ.ಜಗನ್ನಾಥ್,ಚಂದ್ರಶೇಖರ್, ಸತೀಶ್ ಕುಮಾರ್, ರಂಗಪ್ಪ, ಎಸ್.ಪಿ.ಮುನಿರಾಜು ಅನಂತಕುಮಾರಿ, ರಾಧಾಕೃಷ್ಣಾರೆಡ್ಡಿ ನಾಗೇಶ್ ಇತರರಿದ್ದರು.
೧೯ ದೇವನಹಳ್ಳಿ ಚಿತ್ರಸುದ್ದಿ: ೧ದೇವನಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.