ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಡೆಂಘೀ ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜನತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರ ಹೇಳಿದರು.ಡೆಂಘೀ ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜನತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರ ಹೇಳಿದರು. ಹನೂರಿನಲ್ಲಿ ವೈದ್ಯರ ಸಭೆಯಲ್ಲಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ವೈದರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಡೆಂಘೀ ನಿಯಂತ್ರಣದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಿದಾಗ ಪರಿಣಾಮಕಾರಿಯಾಗಿ ಡೆಂಘೀ ನಿಯಂತ್ರಿಸಿ ಸಂಪೂರ್ಣವಾಗಿ, ನಿರ್ಮೂಲನೆ ಮಾಡಲು ಸಹಕಾರಿಯಾಗುತ್ತದೆ. ಸ್ವಲ್ಪ ನೀರಿನಲ್ಲಿ ಸೊಳ್ಳೆಗಳನ್ನು ಹುಟ್ಟುಹಾಕುತ್ತದೆ. ನಾಗರಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರನ್ನು ಖಾಲಿ ಹೂಕುಂಡಗಳು, ಬಿಸಾಡಿದ ಕಂಟೈನರ್‌ಗಳು, ಟೈರ್‌ಗಳು ಮತ್ತು ಗಟರ್‌ಗಳಲ್ಲಿ ತೆರವುಗೊಳಿಸಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವಿವಿಧ ಇಲಾಖಾಧಿಕಾರಿಗಳ ಸಹಕಾರದೊಂದಿಗೆ ಅರಿವು ಮೂಡಿಸಿ ಎಂದರು.
ಟಿ.ಬಿ, ಕುಷ್ಟ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡುವಂತೆ ಮತ್ತು ಗರ್ಭವತಿಯಾದಂತಹ ತಾಯಿ ಮಗುವಿನ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸಮಯಪಾಲನೆ ಮಾಡುವಂತೆ ಸೂಚಿಸಿದರು.ಹನೂರು ತಾಲೂಕಿನ ಕೂಡ್ಲೂರು ಪಿಜಿಪಾಳ್ಯ ಆಸ್ಪತ್ರೆಗಳಿಗೆ ಹೆಚ್ಚುವರಿ ಸಿಬ್ಬಂದಿ ನೇಮಿಸುವ ಕುರಿತು ಶೀಘ್ರದಲ್ಲಿ ಕ್ರಮಕೈಗೊಳ್ಳುವುದರ ಜೊತೆಗೆ ಸದ್ಯದಲ್ಲಿ ಹನೂರು ತಾಲೂಕಿಗೆ ಹೆಚ್ಚುವರಿ ಮೂರು ಆ್ಯಂಬುಲೆನ್ಸ್ ಸೇರಿ ರಾಮಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಶೀಘ್ರದಲ್ಲಿಯೇ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ವೈದ್ಯಾಧಿಕಾರಿ ಡಾ.ರಾಜೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅಂಕಪ್ಪ, ಕುಷ್ಟ ರೋಗ ಅಧಿಕಾರಿ ಚಂದ್ರಶೇಖರ್ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ವೈದ್ಯರಾದ ಡಾ. ಪುಷ್ಟರಾಣಿ, ಮನು, ಜಾನವಿ ಸೇರಿದಂತೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಿಂಬೇಸ್, ಸಿಬ್ಬಂದಿ ಮುನಿಸ್ವಾಮಿ ಹಾಜರಿದ್ದರು.