ಸಾರಾಂಶ
ಪುರಸಭೆ ಹೊಂದಿರುವ ಆದಾಯದ ಮಿತಿಯಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು.
ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕುರುಗೋಡು ಪುರಸಭೆ ಅಧ್ಯಕ್ಷ ಹೇಳಿಕೆಕನ್ನಡಪ್ರಭ ವಾರ್ತೆ ಕುರುಗೋಡು
ಪುರಸಭೆ ಹೊಂದಿರುವ ಆದಾಯದ ಮಿತಿಯಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷ ಟಿ. ಶೇಖಣ್ಣ ಹೇಳಿದರು.ಪಟ್ಟಣದ ಪುರಸಭೆಯಲ್ಲಿ ಜರುಗಿದ ಬಜೆಟ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ವಿದ್ಯುತ್ ಸಮಸ್ಯೆಯಾಗದಂತೆ ಹೆಚ್ಚುವತಿ ಪರಿವರ್ತಕಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗುವುದು ಎಂದರು.
ವಸತಿ ಶಾಲೆ, ಬಾಲಕಿಯರ ವಸತಿ ನಿಯಲಗಳನ್ನು ಪಟ್ಟಣದಲ್ಲಿ ಪ್ರಾರಂಭಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಕೆಲವು ವ್ಯಕ್ತಿಗಳು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿ. ಶೇಖಣ್ಣ, ವಸತಿ ಶಾಲೆ ಮತ್ತು ಬಾಲಕಿಯರ ವಸತಿನಿಲಯಗಳ ನಿರ್ಮಾಣ ಮತ್ತು ಸ್ಥಾಪನೆ ಪುರಸಭೆ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸರ್ಕಾರದ ಮಟ್ಟದಲ್ಲಿ ನಡೆಯಬೇಕು. ಶಾಸಕರ ಗಮನಕ್ಕೆ ತಂದು ಬೇಡಿಕೆ ಸಾಕಾರಗೊಳಿಸಲಾಗುವುದು ಎಂದರು.ಶವ ಸಾಗಣೆ ವಾಹನ ಖರೀದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಾಹನ ಖರೀದಿಗೆ ಪುರಸಭೆಯಲ್ಲಿ ಅವಕಾಶವಿಲ್ಲ. ಸ್ಮಶಾನ ಅಭಿವೃದ್ಧಿ ಮತ್ತು ಶವ ಸುಡಲು ಚಿತಾಗಾರ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಹರ್ಷವರ್ಧನ ರೆಡ್ಡಿ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಲೆಕ್ಕಾಧಿಕಾರಿ ರಾಜಶೇಖರ್ ಇದ್ದರು.