ಸಾರಾಂಶ
ಕನ್ನಡ ಪ್ರಭವಾರ್ತೆ ಮಾಲೂರುಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ಘೋಷಿಸಿದ್ದು, ಜನರು ಅಂತಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್ ಹೇಳಿದರು.
ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್-೧೯ ನಿಯಂತ್ರಣ ಹಿನ್ನೆಲೆಯಲ್ಲಿ ಇಲ್ಲಿನ ವೈದ್ಯರೊಂದಿಗೆ ಮುನ್ನೆಚ್ಚರಿಕಾ ಸಭೆ ನಡೆಸಿದ ನಂತರ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಿರುವ ಆಕ್ಸಿಜನ್ ಪ್ಲಾಂಟ್ ವೀಕ್ಷಿಸಿ ಮಾತನಾಡಿದರು.ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ:
ಇತ್ತಿಚಿನ ದಿನಗಳಲ್ಲಿ ಕೋವಿಡ್ ಅದರಲ್ಲೂ ಜೆ.ಎನ್-೧ ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಇದು ಕೇರಳದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಈಗ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿ ಬೇಕಾಗಿದೆ. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಆದ ತಪ್ಪುಗಳು ಈ ಬಾರಿ ಆಗದಂತೆ ಎಚ್ಚರವಹಿಸಲಾಗಿದೆ. ಅಕ್ಸಿಜನ್, ವೆಂಟಿಲೇಟರ್, ಬೆಡ್ ಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು.ಕಳೆದ ಬಾರಿ ಕೋವಿಡ್ ನಿಯಂತ್ರಣದ ಔಷಧಿ ಕಂಡು ಹಿಡಿದ ಮೇಲೆ ನಿಯಂತ್ರಣಕ್ಕೆ ಮುಂದಾಗಿದ್ದು, ಅಷ್ಟರಲೇ ಹಲಾವರು ಜನರು ಮೃತಪಟ್ಟಿದ್ದರು. ಈಗ ಅಂತಹ ತೊಂದರೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಆಸ್ವತ್ರೆಯ ವೈದ್ಯಾಧಿಕಾರಿಗಳು ಆಕ್ಸಿಜನ್ ಲಭ್ಯತೆ ಬಗ್ಗೆ ಖಾತರಿ ಪಡಿಸಬೇಕು. ತಾಂತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಅರಿತು ಪಾಲಿಸಬೇಕು ಎಂದು ಅವರು ಹೇಳಿದರು.
ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್:ಕೋವಿಡ್‌ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗಿದೆ. ಸಾರ್ವಜನಿಕರು ಸಹ ಉಸಿರಾಟದ ಸಮಸ್ಯೆ, ಜ್ವರ, ಕೆಮ್ಮು, ಶೀತ ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವರು ಕೂಡಲೇ ಸರ್ಕಾರಿ ಆಸ್ಪತೆ ವೈದ್ಯರನ್ನು ಭೇಟಿ ಮಾಡಬೇಕು. ಅನಾರೋಗ ಇದ್ದವರು ಮಾಸ್ಕ ಧರಿಸುವ ಜತೆಯಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ತಾಲೂಕಿನ ತಮಿಳುನಾಡು ಗಡಿಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗಿದೆ. ಆಸ್ವತ್ರೆಯಲ್ಲಿ ಸೋಕಿಂತರ ಚಿಕಿತ್ಸೆಗಾಗಿ ೫೦ ಅಕ್ಸಿಜನ್ ಬೆಡ್ ಗಳನ್ನು ನಾಲ್ಕು ವೆಂಟಿಲೇಟರ್ ಗಳನ್ನು ಮೀಸಲಿಡಲಾಗಿದೆ. ಚಿಕಿತ್ಸೆಗೆ ಕೊರತೆಯಾಗದಂತೆ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ. ೧೦ ವೈದ್ಯರು ೨೬ ಶ್ರೋಷೂಕಿ ಯರು,೨೪ ಮಂದಿ ಡಿ.ಗ್ರೊಪ್ ನೌಕರರು ಆಸ್ವತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.ತಾಲೂಕು ವೈದ್ಯಾಧಿಕಾರಿ ಡಾ.ರಮೇಶ್ ಬಾಬು, ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್, ಡಾ.ಚೆನ್ನಕೇಶವ ಸೇರಿದಂತೆ ಇನ್ನಿತರ ಆರೋಗ್ಯ ಇಲಾಖೆ ಅಧಿಕಾರಿಗಳಿದ್ದರು.