ಸಾರಾಂಶ
ಚನ್ನಪಟ್ಟಣ: ಗ್ರಾಮೀಣ ಪ್ರದೇಶದಲ್ಲಿ ಇ-ಸ್ವತ್ತು, ಚರಂಡಿ, ವಸತಿ, ರಸ್ತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಎದ್ದುಕಾಣುತ್ತಿವೆ. ಹಂತ-ಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಚನ್ನಪಟ್ಟಣ: ಗ್ರಾಮೀಣ ಪ್ರದೇಶದಲ್ಲಿ ಇ-ಸ್ವತ್ತು, ಚರಂಡಿ, ವಸತಿ, ರಸ್ತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಎದ್ದುಕಾಣುತ್ತಿವೆ. ಹಂತ-ಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಳೂರು, ಮತ್ತಿಕೆರೆ, ಮುದುಗೆರೆ, ಚಕ್ಕೆರೆ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಆಂದೋಲನ, ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಂದುಕೊರತೆ ಆಲಿಸುವ ವೇಳೆ ಜನರು, ಇ-ಸ್ವತ್ತು, ನಾಡ ಕಚೇರಿ ಸ್ಥಳಾಂತರ, ಸರ್ಕಾರಿ ಶಾಲೆ ಸ್ಥಳಾಂತರ, ವಸತಿ, ರಸ್ತೆ, ಕುಡಿಯುವ ನೀರು, ರಸ್ತೆ ಬದಿ ತ್ಯಾಜ್ಯ ಎಸೆಯುವುದು, ದೇವಸ್ಥಾನಗಳಿಗೆ ಮೂಲ ಸೌರ್ಕಯ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಲು ನಾವೆಲ್ಲರೂ ಕೈ ಜೋಡಿಸೋಣ ಎಂದರು.ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವೆ. ಎಲ್ಲವನ್ನು ಒಂದೇ ದಿನದಲ್ಲಿ ಬಗೆಹರಿಸಲು ಸಾಧ್ಯವಾಗುವುದಿಲ್ಲ, ಆದರೂ ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸಾರ್ವಜನಿಕ ಬದುಕಿನಲ್ಲಿರುವ ನಾವು ಜನಸಾಮಾನ್ಯರ ಕಷ್ಟ ಸುಖಗಳನ್ನು ಕೇಳುವುದರ ಜತೆಗೆ ಅವುಗಳನ್ನು ಪರಿಹರಿಸುವುದರ ಕಡೆಗೂ ಗಮನ ನೀಡಬೇಕಿದೆ. ಇಂದು ಅಧಿಕಾರಿಗಳು ಹಾಗೂ ನಮ್ಮ ಗಮನಕ್ಕೆ ತಂದಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮಗಳ ಸಹಕಾರ ಅಗತ್ಯ ಎಂದರು.ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ:
ಇ-ಸ್ವತ್ತು ಆಂದೋಲನ ಹಾಗೂ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರು ಹತ್ತಾರು ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು. ಮಳೂರು ಗ್ರಾಮದಲ್ಲಿನ ಅಪ್ರಮೇಯ ಸ್ವಾಮಿ ದೇವಾಲಯ, ಶಾಲೆ ಪಕ್ಕದಲ್ಲೆ ಶೌಚಾಲಯ ನಿರ್ಮಿಸಿದ್ದು, ಇದರಿಂದ ಮಕ್ಕಳಿಗೆ ಹಾಗೂ ಪ್ರವಾಸಿಗರಿಗೆ ಸಾಕಷ್ಟು ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ, ಸರ್ಕಾರಿ ಶಾಲೆಯನ್ನು ಸ್ಥಳಾಂತರಿಸುವ ಬಗ್ಗೆ, ಬೈರಾಪಟ್ಟಣದ ಕಂದಾಯ ಗ್ರಾಮದ ಬಗ್ಗೆ, ಪಂಚಾಯಿತಿಗಳಲ್ಲಿ ಜನ ಸಾಮಾನ್ಯರಿಗೆ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗದಿರುವ, ಜಲಜೀವನ್ ಅಡಿ ರಸ್ತೆಗಳು ಹಾಳಾಗಿರುವುದು, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರು.ಸಮರ್ಪಕ ತ್ಯಾಜ್ಯ ವಿಲೇವಾರಿಯಾಗಲಿ:
ಬೆಂಗಳೂರು ಮೈಸೂರು ಹೆದ್ದಾರಿ ಬದಿಯಲ್ಲಿ ಸೇತುವೆ ಹತ್ತಿರದಿಂದ ಹಿಡಿದು ಭೈರಾಪಟ್ಟಣ ಹೆದ್ದಾರಿವರೆಗೂ ಕೋಳಿ ತ್ಯಾಜ್ಯ ಹಾಗೂ ಕಸವನ್ನು ತಂದು ರಸ್ತೆಗೆ ಸುರಿಯುತ್ತಿದ್ದಾರೆ. ಇದರಿಂದ ವಾಹನ ಸವಾರರು ಹಾಗೂ ನಾಗರಿಕರು ಸಂಚಾರ ಮಾಡುವುದು ಕಷ್ಟವಾಗುತ್ತಿದೆ. ಈ ಬಗ್ಗೆ ಗಮನಹರಿಸುವಂತೆ ಯುವತಿಯೋರ್ವಳು ಮನವಿ ಸಲ್ಲಿಸಿದಳು.ಇದನ್ನು ಕೇಳಿ ಅಧಿಕಾರಿಗಳ ವಿರುದ್ಧ ಗರಂ ಆದ ಶಾಸಕರು, ಈ ಸಮಸ್ಯೆ ಸಾಕಷ್ಟು ವರ್ಷಗಳಿಂದ ಕೇಳಿ ಬರುತ್ತಿದೆ. ಇನ್ನೂ ಇದನ್ನು ಬಗೆಹರಿಸುತ್ತಿಲ್ಲವೆಂದರೆ ಹೇಗೆ? ಈ ಸಂಬಂಧ ಇಒ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಸಮಸ್ಯೆ ನಿವಾರಿಸುವಂತೆ ತಾಕೀತು ಮಾಡಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಸಂದೀಪ್, ಎಇಇ ಶಂಕರಪ್ಪ, ವಲಯ ಅರಣ್ಯಾಧಿಕಾರಿ ಮಲ್ಲೇಶ್, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪ್ರಮೋದ್, ಮಳೂರು ಗ್ರಾಪಂ ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ರಾಜೇಶ್, ಮುಖಂಡರಾದ ಮಲವೇಗೌಡ ಸೇರಿದಂತೆ ಹಲವರು ಹಾಜರಿದ್ದರು.ಪೋಟೊ೬ಸಿಪಿಟಿ೧:
ಚನ್ನಪಟ್ಟಣ ತಾಲೂಕಿನ ಮಳೂರು ಜಿಪಂ ವ್ಯಾಪ್ತಿಯಲ್ಲಿ ನಡೆದ ಇ-ಸ್ವತ್ತು, ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಶಾಸಕ ಯೋಗೇಶ್ವರ್ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.ಪೋಟೊ೬ಸಿಪಿಟಿ೨:
ಚನ್ನಪಟ್ಟಣ ತಾಲೂಕಿನ ಮಳೂರು ಜಿಪಂ ವ್ಯಾಪ್ತಿಯಲ್ಲಿ ನಡೆದ ಇ-ಸ್ವತ್ತು, ಹಾಗೂ ಸಾರ್ವಜನಿಕರ ಅಹವಾಲು ಸಲ್ಲಿಕೆ ಕಾರ್ಯಕ್ರಮವನ್ನು ಶಾಸಕ ಯೋಗೇಶ್ವರ್ ಉದ್ಘಾಟಿಸಿದರು.