ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಗರ್ಭನ್ಯಾಸ ಕಾರ್ಯಕ್ರಮ

| Published : Sep 03 2025, 01:02 AM IST

ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಗರ್ಭನ್ಯಾಸ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಷಡಾದಾರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿನ ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಷಡಾದಾರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಧಾರ್ಮಿಕ ಪೂಜಾ ವಿಧಿ ವಿಧಾನ ಕಾರ್ಯಕ್ರಮವನ್ನು ತಂತ್ರಿಗಳಾದ ಸದಾಶಿವ ಉಪಾಧ್ಯಾಯ ಉಡುಪಿ ರೆಂಜಲ, ಉದಯ ಕಳತ್ತೂರು, ರಮೇಶ್ ಮೂಟೇರಿ, ದೇವಾಲಯದ ಮುಖ್ಯ ಅರ್ಚಕ ಸುಧೀರ ನೆರವೇರಿಸಿದರು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲ, ಗೌರವಾಧ್ಯಕ್ಷ ರಮೇಶ್, ಖಜಾಂಚಿ ಸೂರ್ಯಕುಮಾರ್ ಪದಾಧಿಕಾರಿಗಳು ಹಾಗೂ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಸುಜಿಕುಮಾರ್, ಪದಾಧಿಕಾರಿಗಳು, ಸದಸ್ಯರು, ಹಿರಿಯರಾದ ಶ್ರೀನಿವಾಸ್, ಆನಂದ ಸ್ವಾಮಿ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.