ಸಾರಾಂಶ
ಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.
ಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.
ಹೋಬಳಿಯ ಅರದೇಶನಹಳ್ಳಿ ವೃತ್ತದ ಆಲೂರು ದುದ್ದನಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಈಚೆಗೆ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ. ಗರ್ಭಿಣಿಯರಿಗೆ ರಾಷ್ಟ್ರೀಯ ಪೋಷಣ್ ಅಭಿಯಾನದ ಮೂಲಕ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ. ಮಹಿಳೆಯರು ಯಾವ ರೀತಿ ಪೌಷ್ಟಿಕ ಆಹಾರ ಸೇವಿಸಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಹೇಗೆ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುವುದು ಎಂದರು.ಆಲೂರು ದುದ್ದನಹಳ್ಳಿ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಜೀವನ ಶೈಲಿ ಬದಲಿಸಿಕೊಳ್ಳಬೇಕು. ಆಧುನಿಕ ಜೀವನದಲ್ಲಿ ಸಣ್ಣ ಕುಟುಂಬಗಳ ಸಂಖ್ಯೆ ಹೆಚ್ಚಾಗುತ್ತಿದೆ. ತಾಯಿ ಮಗುವಿನ ಆರೋಗ್ಯ ಕುರಿತು ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶದ ಆಹಾರ ಸೇವನೆ ಸೇರಿದಂತೆ ಹಲವಾರು ಆರೋಗ್ಯ ಸಲಹೆಗಳನ್ನು ಅಂಗನವಾಡಿ ಕಾರ್ಯಕರ್ತರು ನೀಡಿದ್ದಾರೆ ಎಂದರು.
ಜಿಲ್ಲಾ ನಿರೂಪಣಾ ಅಧಿಕಾರಿ ಎನ್.ಅನಿತಾ ಲಕ್ಷ್ಮೀ, ಆಲೂರು ದ್ದುದನಹಳ್ಳಿ ಗ್ರಾಪಂ ಸದಸ್ಯರು, ಗ್ರಾಪಂ ಪಿಡಿಒ ನಂದಿನಿ, ಕಾರ್ಯದರ್ಶಿ ಭಾರತಿ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಮಹೇಶ್, ಅಂಗನವಾಡಿ ಕಾರ್ಯಕತೆಯರು ಹಾಜರಿದ್ದರು.೦೧ ಚಿತ್ರ ಸುದ್ದಿ ಕುಂದಾಣ ೧೭:
ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.