2ರಂದು ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ಪೂರ್ವಭಾವಿ ಸಭೆ

| Published : Jan 01 2024, 01:15 AM IST

2ರಂದು ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ಪೂರ್ವಭಾವಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸಲು ಜ. 2ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ತಾಲೂಕು ಅಧ್ಯಕ್ಷ ಕೊಟ್ರಗೌಡ ಪಾಟೀಲ ಹೇಳಿದರು.

ಮುಂಡರಗಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕೆಂದು ಒತ್ತಾಯಿಸಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟ ಮಾಡುತ್ತಾ ಬಂದಿದ್ದು, ಅದರ ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸಲು ಜ. 2ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ತಾಲೂಕು ಅಧ್ಯಕ್ಷ ಕೊಟ್ರಗೌಡ ಪಾಟೀಲ ಹೇಳಿದರು.ಅವರು ಭಾನುವಾರ ಮುಂಡರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಳೆದ 3 ವರ್ಷಗಳಿಂದ ನಮ್ಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟ ಮಾಡುತ್ತಾ ಬಂದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳೂ ನಮ್ಮ ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿವೆ ಎಂದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳಾದರೂ ಸಹ ಈ ಕುರಿತು ಅನೇಕ ಬಾರಿ ಒತ್ತಾಯಿಸುತ್ತಾ ಬಂದರೂ ಸಹ ಸರ್ಕಾರದಿಂದ ಯಾವುದೇ ರೀತಿಯ ಉತ್ತಮ ಪ್ರತಿಕ್ರಿಯೆ ತೋರಿಸುತ್ತಿಲ್ಲ. ಹೀಗಾಗಿ ಮುಂದಿನ ಹೋರಾಟದ ಕುರಿತು ಚರ್ಚಿಸಲು ಸಭೆ ಕರೆದಿದ್ದು, ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಮುಖಂಡ ನಾಗರಾಜ ಹೊಂಬಳಗಟ್ಟಿ ಮಾತನಾಡಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಮ್ಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕೂಡಲ ಸಂಗಮದಿಂದ ಪಾದಯಾತ್ರೆ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹೋರಾಟ ನಡೆಸಿದರು. ಹೆದ್ದಾರಿ ತಡೆ ನಡೆಸಿ ಅಲ್ಲಿ ಲಿಂಗಪೂಜೆ ಮಾಡುವ ಮೂಲಕವೂ ಪ್ರತಿಭಟನೆ ಮಾಡಿದರೂ ಸಹ ಸರ್ಕಾರಗಳು ಶ್ರೀಗಳ ಹೋರಾಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ತಕ್ಷಣವೇ ಮುಂದಾಗಬೇಕು. ಜ.2ರ ಸಭೆಗೆ ಮುಂಡರಗಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಸಾಯಿ, ವಿ.ಎಸ್.ಗಟ್ಟಿ ಸೇರಿದಂತೆ ಅನೇಕರು ಮಾತನಾಡಿದರು.