ಸಾರಾಂಶ
ಸಿಎಂ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಾರ್ಚ್ ವೇಳೆಗೆ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು. ಸಮ್ಮೇಳನ ನಡೆಯುವ ಸ್ಥಳದಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು.
ಕನ್ನಡಪ್ರಭ ವಾರ್ತೆ ಕೋಲಾರಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ ಜಿಲ್ಲೆಯಲ್ಲಿ ಮಾರ್ಚ್ ವೇಳೆಗೆ ಹಮ್ಮಿಕೊಳ್ಳಲಾಗುವುದು ಎಂದು ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ ತಿಳಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾರಂಭದಲ್ಲಿ ಸಿಎಂ ಭಾಗಿ
ಸಿಎಂ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಾರ್ಚ್ ವೇಳೆಗೆ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು. ಸಮ್ಮೇಳನ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲು ಸೂಚಿಸಿದರು.ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಸಮ್ಮೇಳನಕ್ಕೆ, ಸರಕಾರದ ವಿವಿಧ ೩೫ ಇಲಾಖೆಗಳ ಫಲಾನುಭವಿಗಳ ಪಟ್ಟಿ ತಯಾರಿಸಿ, ಸಿದ್ದತೆ ಮಾಡಿಕೊಂಡು, ಸಮಾವೇಶಕ್ಕೆ ಫಲಾನುಭವಿಗಳಿಗೆ ಕರೆ ತರುವ ವ್ಯವಸ್ಥೆ ಇಲಾಖೆವಾರು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ತಿಳಿಸಿದರು.೨೫ ಸಾವಿರ ಫಲಾನುಭವಿಗಳು
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಾವಿರಾರು ಫಲಾನುಭವಿಗಳು ಇದ್ದು, ಅರ್ಹರನ್ನು ಗುರುತಿಸಿ ಕರೆತರಬೇಕು. ಸೌಲಭ್ಯ ಪಡೆಯದಿರುವವರನ್ನೂ ಗುರುತಿಸಬೇಕು ಎಂದರಲ್ಲದೆ, ಕಾರ್ಯಕ್ರಮಕ್ಕೆ ಕಂದಾಯ, ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ, ಆರೋಗ್ಯ, ಕೃಷಿ, ಕಾರ್ಮಿಕ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಫಲಾನುಭವಿಗಳನ್ನು ಆಯಾ ಇಲಾಖೆಯ ವತಿಯಿಂದ ಕರೆತರಲಾಗುವುದು. ಒಟ್ಟಾರೆಯಾಗಿ ಅಂದಾಜು ೨೫ ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ, ಕಾರ್ಯಕ್ರಮಕ್ಕೆ ಅವಶ್ಯಕ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಕರೆತಂದು ಆಯೋಜಿಸಲಾಗುವುದು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಫಲಾನುಭವಿಗಳಿಗೆ ನೀಡಲಾಗುವುದು ಎಂದರು.ವಾಹನ ಸೌಲಭ್ಯ;
ಪ್ರತಿ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮ ಪಂಚಾಯಿತಿಯ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಶಿ?ಚಾರ ಅನ್ವಯ ಶಾಸಕರು, ವಿಧಾನ ಪರಿ?ತ್ ಸದಸ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಮೈತ್ರಿ ಇದ್ದರು.