ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಎಂಬಿಎ ಹಾಗೂ ಎಂಸಿಎ ಪದವಿ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆ.೪ರಂದು ಪರೀಕ್ಷೆ ಜರುಗಲಿವೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಎಂಬಿಎ ಹಾಗೂ ಎಂಸಿಎ ಪದವಿ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆ.೪ರಂದು ಪರೀಕ್ಷೆ ಜರುಗಲಿವೆ. ಬೆಳಗ್ಗೆ ೧೦.೩೦ಕ್ಕೆ ನಡೆಯುವ ಎಂಸಿಎ ಪ್ರವೇಶಾತಿ ಪರೀಕ್ಷೆಗೆ ೩೮೭ ಹಾಗೂ ಮಧ್ಯಾಹ್ನ ೨.೩೦ರಿಂದ ನಡೆಯುವ ಎಂಬಿಎ ಪರೀಕ್ಷೆಗೆ ೬೩೭ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದರು.ಇಲಾಖೆಯ ಪರೀಕ್ಷಾ ಮಾರ್ಗಸೂಚಿಯಂತೆ ಪರೀಕ್ಷೆ ನಡೆಯುವ ದಿನದಂದು ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಅಭ್ಯರ್ಥಿಯ ಗುರುತಿನ ಪತ್ರ ಪರಿಶೀಲಿಸಿ ಪ್ರವೇಶ ಕಲ್ಪಿಸಬೇಕು. ಕೊಠಡಿ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ಪರೀಕ್ಷಾ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಒಂದು ಕೊಠಡಿಯಲ್ಲಿ ೨೪ ಅಭ್ಯರ್ಥಿಗಳು ಸೇರಿ ಓರ್ವ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಸಿಬ್ಬಂದಿಗಳಿಗೆ ಪರೀಕ್ಷೆಯ ತರಬೇತಿ ನೀಡಬೇಕು. ವಿದ್ಯಾರ್ಥಿಗಳು ನಿಗದಿಪಡಿಸಿದ ಆಸನದಲ್ಲಿರುವ ಬಗ್ಗೆ ಮೇಲ್ವಿಚಾರಕರು ಖಚಿತಪಡಿಸಿಕೊಳ್ಳಬೇಕು. ಒಂದು ಬಾರಿ ಅಭ್ಯರ್ಥಿಗಳಿಗೆ ಒಎಂಆರ್ ಪತ್ರಿಕೆ ವಿತರಿಸಿದ ನಂತರ ಪರೀಕ್ಷೆ ಸಮಯ ಮುಗಿಯುವವರೆಗೂ ಹಿಂಪಡೆಯಬಾರದು. ಪರೀಕ್ಷೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸುವಂತೆ ಅವರು ಸೂಚನೆ ನೀಡಿದರು. ಅಲ್ಲದೇ, ಪರೀಕ್ಷಾ ಕೊಠಡಿಯಲ್ಲಿ ನೀರು, ಗಾಳಿ ಬೆಳಕಿನ ವ್ಯವಸ್ಥೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಪ್ರಾಂಶುಪಾಲ ಬಸವರಾಜ ಗಂಗನಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))