ಸಾರಾಂಶ
ಕನ್ನಡಪ್ರಭ ವಾರ್ತೆ B
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 43 ಮತಗಟ್ಟೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಹಂತದ ತಯಾರಿ ಕುರಿತು ಬುಧವಾರ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 14,432 ಮತದಾರರಿದ್ದಾರೆ.
ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ. ಮತದಾನದ ಮೇಲ್ವಿಚಾರಣೆಗೆ ಎಫ್ಎಸ್‌ಟಿ ಮತ್ತು ಎಸ್ಎಸ್ ಟಿ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಮತಗಟ್ಟೆಗಳ ಬಳಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತಗಟ್ಟೆಯ 100 ಮೀಟರ್ ಅಂತರದಲ್ಲಿ ಐದು ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಜತೆಗೆ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು.
ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವನ್ನು ನಗರ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ಥಾಪಿಸಿದ್ದು, ಫೆ.20ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(690,390))
;Resize=(128,128))
;Resize=(128,128))
;Resize=(128,128))
;Resize=(128,128))