ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ: ಕೃಷ್ಣ ಬೈರೇಗೌಡ

| Published : Feb 22 2024, 01:50 AM IST

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ: ಕೃಷ್ಣ ಬೈರೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7.082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7.082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಪ್ರಸ್ತುತ 18 ಜಿಲ್ಲೆಗಳ 46 ತಾಲೂಕುಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು 46 ಗ್ರಾಮಗಳಿಗೆ 58 ಟ್ಯಾಂಕರ್‌ಗಳ ಮೂಲಕ ಹಾಗೂ 156 ಗ್ರಾಮಗಳಲ್ಲಿ 183 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಲ್ಲದೆ, 4 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 46 ವಾರ್ಡ್ ಗಳಲ್ಲಿ 12 ಟ್ಯಾಂಕರ್ ಗಳ ಮೂಲಕ ತುರ್ತು ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ ಎಂದಿದ್ದಾರೆ. ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಒದಗಿಸಲು ಸಿದ್ಧತೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಒಟ್ಟು 6,416 ಖಾಸಗಿ ಬೋರ್ವೆಲ್ ಗಳನ್ನು ಗುರುತಿಸಿದ್ದು, ಅವುಗಳಲ್ಲಿ 2,654 ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಗ್ರಾಪಂ ಹಂತದಲ್ಲಿ ತಂಡ ರಚನೆ:ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತೀರ್ಮಾನದಂತೆ ಗ್ರಾಪಂ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಕುಡಿಯುವ ನೀರು ಬಿಲ್ ಗಳನ್ನು 15 ದಿನದೊಳಗೆ ಪಾವತಿಸುವಂತೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಿದ್ದು, ಇದನ್ನು ಅನುಸರಿಸಲು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ತುರ್ತು ಕುಡಿಯುವ ನೀರು ಹಾಗೂ ಜಾನುವಾರು ಸಂರಕ್ಷಣೆಗಾಗಿ ಈಗಾಗಲೇ 324 ಕೋಟಿ ರು. ಗಳನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಗೊಳಿಸಲಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 735.87 ಕೋಟಿ ರು. ಹಾಗೂ ತಹಸೀಲ್ದಾರ್ ಪಿಡಿ ಖಾತೆಯಲ್ಲಿ 131.95 ಕೋಟಿ ರು. ಸೇರಿದಂತೆ ಒಟ್ಟು 867.82 ಕೋಟಿ ರು. ಅನುದಾನ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.