ಸಾರಾಂಶ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ ಕೋರಲು ನಗರದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ, ಭದ್ರಾವತಿ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ ಕೋರಲು ನಗರದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.ಕಾರೇಹಳ್ಳಿ- ಕೆಂಪೇಗೌಡ ನಗರ- ಬಾರಂದೂರು- ಮಸರಹಳ್ಳಿ- ಮಾರುತಿನಗರ- ಶಿವನಿ ಕ್ರಾಸ್- ಸಾದತ್ ಕಾಲೋನಿ- ಗಾಂಧಿ ವೃತ್ತ, ಒ.ಎಸ್.ಎಂ. ರಸ್ತೆ (ಶಾಸಕರ ಮನೆ ಮುಂಭಾಗ), ರಂಗಪ್ಪ ವೃತ್ತ -ಸಿ.ಎನ್ ರೋಡ್- ಮಾಧವಚಾರ್ ವೃತ್ತ- ಬಿ.ಎಚ್. ರಸ್ತೆ ಮಾರ್ಗವಾಗಿ ಅಂಡರ್ ಬ್ರಿಡ್ಜ್ ಉಂಬ್ಳೆಬೈಲು ರಸ್ತೆ ಮಾರ್ಗವಾಗಿ ಜಯಶ್ರೀ ವೃತ್ತ- ಜನ್ನಾಪುರ- ಸಿದ್ದಾಪುರ- ಬೈಪಾಸ್ ರಸ್ತೆವರೆಗೆ ಚುನಾವಣೆ ಪ್ರಯುಕ್ತ ಬೈಕ್ ರ್ಯಾಲಿ ಮೂಲಕ ಮೆರವಣಿಗೆ ನಡೆಯಲಿದೆ.
ಎಲ್ಲ ಸಮಾಜದ ಸಂಘ, ಸಂಸ್ಥೆಗಳು, ಸಂಘಟನೆಗಳು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಮತ್ತು ಮಹಿಳಾ ಸಂಘಟನೆಗಳು, ಕಾರ್ಮಿಕರು, ರೈತ ಮುಖಂಡರು, ಯುವಕರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮಾಂತರ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು, ನಗರಸಭೆ ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಸದಸ್ಯರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು ಮತ್ತು ಗ್ರಾಪಂ ಹಾಲಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.;Resize=(128,128))
;Resize=(128,128))