ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಗೆ ಇನ್ನೂ ಹೆಚ್ಚು ಆದ್ಯತೆ ನೀಡಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

-ಪಕ್ಷದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ಹಸ್ತಾಂತರ

-----

ಕನ್ನಡಪ್ರಭ ವಾರ್ತೆ ದೇವದುರ್ಗ

ದೇವದುರ್ಗ ಮತ್ತು ಅರಕೇರಾ ತಾಲೂಕುಗಳ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಗೆ ಇನ್ನೂ ಹೆಚ್ಚು ಆದ್ಯತೆ ನೀಡಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

ಪಟ್ಟಣದಲ್ಲಿ ತಮ್ಮ ಮನೆಯಲ್ಲಿ ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶಗಳನ್ನು ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕ್ಷೇತ್ರದಲ್ಲಿ ಬರಗಾಲ ಪರಿಸ್ಥಿತಿ ಕುರಿತು ಸರಕಾರದ ಗಮನ ಸೆಳೆದಿದ್ದು, ಸ್ಥಳೀಯ ಅಧಿಕಾರಿಗಳು ಕೂಡ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆಯಾಗಿದೆ. ಕೂಡಲೇ ಸರಕಾರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಕಳೆದ 3 ವರ್ಷದ ಸೇವಾವಧಿಯಲ್ಲಿ ವಿರೋಧ ಪಕ್ಷದ ಶಾಸಕಿಯಾಗಿದ್ದರೂ, ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದೆ. ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ ಸಹಿ ಎಲ್ಲಾ ಕ್ಷೇತ್ರಗಳ ಅಭ್ಯುದಯಕ್ಕೆ ಅನುದಾನ ಒದಗಿಸಲಾಗಿದೆ.ವಿಬಿ ಜಿ ರಾಮಜಿ ಯೋಜನೆಯಲ್ಲೂ ಕೂಲಿಕಾರರಿಗೆ ಹೆಚ್ಚು ಕೆಲಸ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈಗಾಗಲೇ ಅಧಿವೇಶನ ಪ್ರಾರಂಭಗೊಂಡಿದ್ದು,ಬರಗಾಲದ ಪರಿಹಾರ ಕ್ರಮಗಳ ಜಾರಿಗೆ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚಿಸಲಾಗುವುದು. ಅರಕೇರಾ ಮತ್ತು ದೇವದುರ್ಗ ತಾಲೂಕಿನ ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಒಗ್ಗಟ್ಟಾಗಿ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಕ್ಷೇತ್ರದ ಬಹುತೇಕ ಎಲ್ಲಾ ಗ್ರಾಮಗಳಿಗೆ ಅಭಿವೃಧ್ಧಿಗೆ ಅನುದಾನ ನೀಡಲಾಗಿದೆ.

ನಮ್ಮ ಅವಧಿಯಲ್ಲಿ ಜಾರಿಗೊಂಡ ಯೋಜನೆಗಳು,ಅಭಿವೃದ್ಧಿ ಕಾಮಗಾರಿಗಳು,ವಯಕ್ತಿಯ ಯೋಜನೆಗಳ ಕುರಿತು ಜನಸಾಮನ್ಯರಿಗೆ ತಿಳಿಸಿ,ಹೆಚ್ಚು ಪಕ್ಷದ ಸಂಘಟನೆಗೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

ಪಕ್ಷದ ಕೋರ್ ಕಮೀಟಿ ಅಧ್ಯಕ್ಷ ಶರಣಪ್ಪ ಬಳೆ, ರಾಜ್ಯ ಎಸ್ಟಿ ಮೋರ್ಚಾ ಕಾರ್ಯದರ್ಶಿ ಹನುಮಂತ್ರಾಯ ಚಿಂತಲಕುಂಟಿ, ಜಿಲ್ಲಾ ಉಪಾಧ್ಯಕ್ಷ ಅಮರೇಶ ಪಾಟೀಲ್ ಪರ್ತಪೂರ, ದೇವದುರ್ಗ ತಾಲೂಕು ಅಧ್ಯಕ್ಷ ಬಸನಗೌಡ ದೇಸಾಯಿ, ಅರಕೇರಾ ತಾಲೂಕು ಅಧ್ಯಕ್ಷ ಸಿದ್ದಣ್ಣ ಬಿ.ಗಣೇಕಲ್, ಪಕ್ಷದ ವಕ್ತಾರರಾದ ಗೋವಿಂದರಾಜ್ ನಾಯಕ ಕೊತ್ತದೊಡ್ಡಿ, ಚನ್ನಪ್ಪ ಮಸೀದಪೂರ, ಯುವ ಘಟಕ ಅಧ್ಯಕ್ಷ ರಮೇಶ ರಾಮನಾಳ, ಮುಖಂಡರಾದ ಚನ್ನಪ್ಪ ಬೋವಿ, ರಂಗಮ್ಮ ಇರಬಗೇರಾ ಇದ್ದರು.

-------------------------

16ಕೆಪಿಡಿವಿಡಿ04: ಕರೆಮ್ಮ ಜಿ.ನಾಯಕ